ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ! ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲು | A BBMP study found that coronavirus was also confirmed for Covaccine and Covishield vaccine


ಕೊವ್ಯಾಕ್ಸಿನ್, ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ! ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲು

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಕೊರೊನಾ (Coronavirus) ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದಂತೆ ಎಲ್ಲ ಕೆಲಸ ಕಾರ್ಯಗಳು ಪ್ರಾರಂಭಗೊಂಡಿವೆ. ಸಹಜ ಸ್ಥಿತಿಗೆ ಬರುತ್ತಿದ್ದಂತೆ ಹೊರ ದೇಶಗಳಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆಯಾಗಿದೆ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿವೆ. ತಜ್ಞರು ಸಲಹೆ ನೀಡಿದ ಬೆನ್ನಲ್ಲೆ ಅಧಿಕಾರಿಗಳು ತಮ್ಮ ತಮ್ಮ ಕೆಲಗಳನ್ನು ಪ್ರಾರಂಭಿಸಿದ್ದಾರೆ. ಈ ನಡುವೆ ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿಯೊಂದು ಬಯಲಾಗಿದೆ.

ಕೊವಿಡ್ ಲಸಿಕೆ ಪಡೆದ ಮೇಲೂ ಕೊರೊನಾ ಬಗ್ಗೆ ನಿರ್ಲಕ್ಷ್ಯ ವಹಿಸುವಂತಿಲ್ಲ. ಈ ಬಗ್ಗೆ ಬಿಬಿಎಂಪಿ ಅಧ್ಯಯನದಲ್ಲಿ ಆತಂಕಕಾರಿ ಮಾಹಿತಿ ಬಯಲಾಗಿದೆ. 20 ದಿನದ ಅಂಕಿಅಂಶದಿಂದ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಕೊವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಪಡೆದವರಿಗೂ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ ಎಂಬ ಮಾಹಿತಿ ಬಿಬಿಎಂಪಿ ಅಧ್ಯಯನದಲ್ಲಿ ತಿಳಿದುಬಂದಿದೆ.

ನ.1ರಿಂದ ನ.20ರವರೆಗೆ 1,538 ಜನರಿಗೆ ಕೊವಿಡ್ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಲಸಿಕೆ ಪಡೆದ 1,254 ಜನರಿಗೆ ಸೋಂಕು ದೃಢವಾಗಿರುವುದು ತಿಳಿದುಬಂದಿದೆ. ಲಸಿಕೆ ಪಡೆಯದ 278 ಜನರು ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರ ಪೈಕಿ ಶೇ.72ರಷ್ಟು ಜನ ಲಸಿಕೆ ಪಡೆದವರಾಗಿದ್ದಾರೆ. ಶೇ.18ರಷ್ಟು ಲಸಿಕೆ ಪಡೆಯದವರಿಗೆ ಸೋಂಕು ದೃಢಪಟ್ಟಿದೆ. 655 ಜನರಿಗೆ ಲಸಿಕೆ ಪಡೆದ 100 ದಿನಗಳ ಬಳಿಕ ಕಾಣಿಸಿಕೊಂಡಿದೆ. ಈ ಎಲ್ಲಾ ಸ್ಪೋಟಕ ಮಾಹಿತಿ ಬಿಬಿಎಂಪಿ ಅಧ್ಯಯನದ ಮೂಲಕ ತಿಳಿದುಬಂದಿದೆ.

ಇದನ್ನೂ ಓದಿ

ಅತಿಯಾಯ್ತು ನಟಿಯ ಹಾಟ್​ ಡ್ರೆಸ್​ ಹಾವಳಿ; ಹಿಗ್ಗಾಮುಗ್ಗಾ ಟ್ರೋಲ್​ ಮಾಡಿದ ನೆಟ್ಟಿಗರು

ಹಾವೇರಿ: ಎಸಿಬಿ ಅಧಿಕಾರಿ ಎಂದು ನಗರಸಭೆ ಅಧಿಕಾರಿಗೆ ವಂಚಿಸಲು ಯತ್ನ; ಆರೋಪಿಯನ್ನು ಬಂಧಿಸಿದ ಪೊಲೀಸರು

TV9 Kannada


Leave a Reply

Your email address will not be published. Required fields are marked *