ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿದು ಹಲವು ದಿನಗಳೇ ಕಳೆಯುತ್ತಿದ್ದರೂ ಅದರ ಬಗೆಗಿನ ಚರ್ಚೆಗಳು ಮಾತ್ರ ಇನ್ನೂ ನಿಂತಿಲ್ಲ. ಕ್ರಿಕೆಟ್ ಅಭಿಮಾನಿಗಳು ಮತ್ತು ಮಾಜಿ ಕ್ರಿಕೆಟಿಗರು, ವಿಶ್ಲೇಷಕರು, ಕ್ರಿಕೆಟ್ ತಜ್ಞರು ತಮ್ಮದೇ ಆದ ಅಭಿಪ್ರಾಯಗಳನ್ನು ಹೊರ ಹಾಕುತ್ತಿದ್ದಾರೆ. ಇದೀಗ ಆ ಸಾಲಿಗೆ ಪಾಕಿಸ್ತಾನದ ಮಾಜಿ ನಾಯಕ ಶಾಹೀದ್ ಅಫ್ರಿದಿ ಕೂಡ ಸೇರಿದ್ದಾರೆ.
ಕೊಹ್ಲಿ ನಾಯಕತ್ವ ತ್ಯಜಿಸಿರುವ ಕುರಿತು ಪ್ರತಿಕ್ರಿಯಿಸಿರುವ ಅಫ್ರಿದಿ, ಒಂದು ಹಂತದಲ್ಲಿ ಒತ್ತಡ ತಡೆದುಕೊಳ್ಳಲಾರದಷ್ಟು ಪರಿಸ್ಥಿತಿ ಎದುರಾಗುತ್ತದೆ. ಅದು ಆಟಗಾರನ ಪ್ರದರ್ಶನದ ಮೇಲೂ ಪ್ರಭಾವ ಬೀರಬಹುದು. ಇದೇ ಕಾರಣಕ್ಕಾಗಿಯೇ ಕೊಹ್ಲಿ ತಮ್ಮ ನಾಯಕತ್ವ ತ್ಯಜಿಸಿರಬಹುದು ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಇನ್ನು ಕೊಹ್ಲಿ ನಾಯಕತ್ವದ ಬಗ್ಗೆ ಅಫ್ರಿದಿ ಮೆಚ್ಚುಗೆಯ ಮಾತುಗಳನ್ನಾಡಿದ್ದು, ವಿಶ್ವ ಶ್ರೇಷ್ಠ ನಾಯಕ ಎಂದು ಬಣ್ಣಿಸಿದ್ದಾರೆ. ಸದ್ಯ ನಾಯಕತ್ವ ತ್ಯಜಿಸಿರುವ ವಿರಾಟ್ ಕೊಹ್ಲಿ, ಮುಂದಿನ ಹಂತದಲ್ಲಿ ಕ್ರಿಕೆಟ್ ಅನ್ನು ಹೆಚ್ಚು ಹೆಚ್ಚು ಆನಂದಿಸಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.