ಕೋಲಾರ: ಜಿಲ್ಲೆಯಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು  ವಾರದಲ್ಲಿ ಇಬ್ಬರು ವ್ಯಕ್ತಿಗಳು ಕಾಡಾನೆ ದಾಳಿಗೆ ಬಲಿಯಾದ ಘಟನೆ ನಡೆದಿದೆ. ಹಿಂದೆ ಕಾಡಾನೆ ದಾಳಿಗೆ ವ್ಯಕ್ತಿಯೊರ್ವ ಬಲಿಯಾದ ಬೆನ್ನಲ್ಲೆ ಬಂಗಾರಪೇಟೆ ತಾಲೂಕಿನ ನಾಡಗುಮ್ಮನಹಳ್ಳಿಯಲ್ಲಿ ಮತ್ತೆ ಕಾಡಾನೆ ದಾಳಿ ಮಾಡಿ ವ್ಯಕ್ತಿಯನ್ನು ಬಲಿ ತೆಗೆದುಕೊಂಡಿದೆ.

ಗ್ರಾಮದ ಭತ್ತೆಪ್ಪ (೫೦) ಕಾಡಾನೆ ದಾಳಿಗೆ ಬಲಿಯಾದವರು. ಜಮೀನಿಗೆ ಹೋಗುವಾಗ ದಾರಿ ಮಧ್ಯ ಕಾಡಾನೆ ದಾಳಿ ಮಾಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಗ್ರಾಮದ ಗಡಿಯಲ್ಲಿ ಕಾಡನೆಗಳ ಹಿಂಡು ಬೀಡು ಬಿಟ್ಟಿದ್ದು ಅರಣ್ಯ ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

The post ಕೋಲಾರದಲ್ಲಿ ಕಾಡಾನೆಗೆ ಮತ್ತೊಂದು ಬಲಿ appeared first on News First Kannada.

Source: newsfirstlive.com

Source link