ಕೋಲಾರ: ಪರಿಷತ್ ಚುನಾವಣೆ ಟಿಕೆಟ್ ಲಭಿಸದ ಹಿನ್ನೆಲೆ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಬಿಜೆಪಿ ಸೇರ್ಪಡೆ | Kolar Congress President Chandra Reddy joins BJP amid MLC Election issue


ಕೋಲಾರ: ಪರಿಷತ್ ಚುನಾವಣೆ ಟಿಕೆಟ್ ಲಭಿಸದ ಹಿನ್ನೆಲೆ; ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ಬಿಜೆಪಿ ಸೇರ್ಪಡೆ

ಚಂದ್ರಾರೆಡ್ಡಿ (ಸಂಗ್ರಹ ಚಿತ್ರ)

ಕೋಲಾರ: ಇಲ್ಲಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರ ರೆಡ್ಡಿ ಇಂದು (ನವೆಂಬರ್ 27) ಧಿಡೀರ್ ಬಿಜೆಪಿ ಸೇರ್ಪಡೆ ಆಗಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸದಲ್ಲಿ ಸಿಎಂ ಎದುರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಪರಿಷತ್ ಚುನಾವಣೆ ಟಿಕೆಟ್ ಅಕಾಂಕ್ಷಿಯಾಗಿದ್ದ ಚಂದ್ರಾ ರೆಡ್ಡಿ, ಟಿಕೆಟ್ ಕೈ ತಪ್ಪಿದ ಬಳಿಕ ಯಾರೋಬ್ಬರು ಮಾತನಾಡಿಸದ ಹಿನ್ನಲೆ ಬೇಸರಗೊಂಡಿದ್ದರು ಎಂದು ತಿಳಿದುಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿಎಲ್​ಪಿ ನಾಯಕ ಸಿದ್ದರಾಮಯ್ಯ ಬೆಂಬಲದ ನಿರೀಕ್ಷೆಯಲ್ಲಿದ್ದ ಚಂದ್ರಾ ರೆಡ್ಡಿ ಈಗ ಬಿಜೆಪಿಗೆ ಸೇರಿದ್ದಾರೆ. ಚಂದ್ರಾ ರೆಡ್ಡಿ ನಡೆಯಿಂದ ಕಾಂಗ್ರೆಸ್ ಅವಾಕ್ಕಾಗಿದೆ. ಕಾಂಗ್ರೆಸ್​ನಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಪರಿಷತ್ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಅನ್ಯಾಯ ಆಗಿದೆ. ಹಾಗಾಗಿ ಬೇಸತ್ತು ಕಾಂಗ್ರೆಸ್​​ಗೆ ರಾಜೀನಾಮೆ ನೀಡಿದೆ. ಕಾಂಗ್ರೆಸ್​​ಗೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆ ಆಗಿದ್ದೇನೆ ಎಂದು ಕೋಲಾರದಲ್ಲಿ ಬಿಜೆಪಿ ಸೇರ್ಪಡೆ ಬಳಿಕ ಕೋಲಾರ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಚಂದ್ರಾರೆಡ್ಡಿ ಹೇಳಿಕೆ ನೀಡಿದ್ದಾರೆ. 6 ವರ್ಷ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದೇನೆ. ನನಗೆ ಟಿಕೆಟ್ ಕೊಡುವುದಾಗಿ ಹೇಳಿ ನನ್ನ ಕತ್ತಲಲ್ಲಿಟ್ಟರು. ಸ್ಥಳೀಯ ಶಾಸಕರು‌ ನಮಗೆ ಅನ್ಯಾಯ ಮಾಡಿದ್ದಾರೆ. ಕಾಂಗ್ರೆಸ್​ ಪಕ್ಷ ನನ್ನ ಸೇವೆಯನ್ನು ಪರಿಗಣಿಸಿಲ್ಲ. ಹಾಗಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾದೆ ಎಂದು ಅವರು ತಿಳಿಸಿದ್ದಾರೆ.

ಡಿಸೆಂಬರ್ 10 ರಂದು ವಿಧಾನಪರಿಷತ್​ನ 25 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸಚಿವರಾದ ಕೆ.ಸುಧಾಕರ್, ಮುನಿರತ್ನ, ಸಂಸದ ಮುನಿಸ್ವಾಮಿ ವರ್ತೂರು ಪ್ರಕಾಶ್​ ಭೇಟಿ ಆಗಿದ್ದಾರೆ. ಮಾಜಿ ಸಚಿವ ಹೆಚ್. ನಾಗೇಶ್​ರಿಂದ ವರ್ತೂರು ಪ್ರಕಾಶ್​ ಭೇಟಿ ಮಾಡಲಾಗಿದೆ. ವರ್ತೂರು ಪ್ರಕಾಶ್​ ಮನೆಯಲ್ಲಿ ನಾಯಕರು ಊಟಮಾಡಿದ್ದಾರೆ. ಕೋಲಾರದಲ್ಲಿ ಒಂದೇ ದಿನ ಅಚ್ಚರಿ ರಾಜಕೀಯ ಬೆಳವಣಿಗೆ ನಡೆದಿದೆ. ಕೋಲಾರ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿಜೆಪಿ ಸೇರಿದ್ದಾರೆ. ಕೆ.ಚಂದ್ರಾರೆಡ್ಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ಬೆನ್ನಲ್ಲಿ ಬಿಜೆಪಿ ನಾಯಕರು ವರ್ತೂರು ಪ್ರಕಾಶ್​ ಭೇಟಿಯಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಪರ ಬಿ ಫಾರಂ ಪಡೆದ ಸರ್ಕಾರಿ ಅಧಿಕಾರಿ; ಚುನಾವಣಾ ಆಯೋಗ ಠಾಣೆಯಲ್ಲಿ ಪ್ರಕರಣ ದಾಖಲು

ಇದನ್ನೂ ಓದಿ: BY Vijayendra: 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ; ಬಿವೈ ವಿಜಯೇಂದ್ರ ಘೋಷಣೆ

TV9 Kannada


Leave a Reply

Your email address will not be published. Required fields are marked *