ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇಂದು ರಾಷ್ಟ್ರೀಯ ಕಬ್ಬಡಿ ಆಟಗಾರ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಮೃತ ರಾಷ್ಟ್ರೀಯ ಕಬಡ್ಡಿ ಆಟಗಾರ. 15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು, ಕೋಲಾರದ ಆರ್.ಎಲ್ ಜಾಲಪ್ಪ‌ಅಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ನಾಲ್ಕೈದು ದಿನಗಳ ಹಿಂದೆ ಅರೋಗ್ಯದಲ್ಲಿ ಮತ್ತಷ್ಟು ಏರುಪೇರಾದ ಹಿನ್ನೆಲೆಯಲ್ಲಿ ಐ.ಸಿ.ಯುಗೆ ಶಿಫ್ಟ್​ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ತಡ ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

The post ಕೋಲಾರ; ರಾಷ್ಟ್ರೀಯ ಕಬಡ್ಡಿ ಆಟಗಾರ ಕೊರೊನಾ ಸೋಂಕಿಗೆ ಬಲಿ appeared first on News First Kannada.

Source: newsfirstlive.com

Source link