ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಗುಟ್ಟಹಳ್ಳಿ ಗ್ರಾಮದಲ್ಲಿರುವ ಕೋಳಾಲಮ್ಮ ದೇವಿಯ ಇಬ್ಬರು ಅರ್ಚಕರು ನಿಗೂಢವಾಗಿ ಸಾವನ್ನಪ್ಪಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.
ಕೊಳಾಲಮ್ಮ ದೇವಿಯ ಶ್ರೀಧರ್ (31) ಹಾಗೂ ಲಕ್ಷ್ಮೀಪತಿ (33) ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಶ್ರೀಕ್ಷೇತ್ರ ಕೈವಾರ ಪಕ್ಕದಲ್ಲಿರುವ ಕೊಳಾಲಮ್ಮ ದೇವಾಲಯ ಇದೆ. ಘಟನಾ ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿ ಗೊತ್ತಾಗುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದೆ. ನಿಗೂಢವಾಗಿ ಸಾವನ್ನಪ್ಪಿರೋದ್ರಿಂದ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಅರ್ಚಕರ ಸಾವಿಗೆ ನಿಖರ ಕಾರಣವನ್ನ ಆದಷ್ಟು ಬೇಗ ಪತ್ತೆಹಚ್ಚಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.