ಬೆಂಗಳೂರು: ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಲಾಕ್ ಡೌನ್, ನೈಟ್ ಕರ್ಫ್ಯೂ ಪರಿಹಾರವಲ್ಲ. ಜನ ಸಾಮಾನ್ಯರು ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ ತನ್ನ ನಿರ್ಧಾರ ಬದಲಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಸಲಹೆ ನೀಡಿದ್ದಾರೆ.
ಗೋವಾ ರಾಜ್ಯದ ಚುನಾವಣಾ ಸಿದ್ಧತೆಯಲ್ಲಿ ಬ್ಯುಸಿಯಾಗಿರುವ ಸಿ.ಟಿ ರವಿ ಅವರು ಮಾಧ್ಯ ಪಣಜಿಯಲ್ಲಿ ಹೇಳಿಕೆ ನೀಡಿದ ಸಿ.ಟಿ ರವಿ ಅವರು, ನಾನು ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿಲ್ಲ. ಪ್ರಸ್ತುತ ಸಂದರ್ಭದಲ್ಲಿ ಲಾಕ್ಡೌನ್ ಮತ್ತು ನೈಟ್ ಕರ್ಫ್ಯೂ ವಿಧಿಸಿದರೆ ಜನಸಾಮಾನ್ಯರಿಗೆ ಹೊರೆಯಾಗಲಿದೆ. ಸರ್ಕಾರ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು. ಪರಿಸ್ಥಿತಿಯನ್ನು ಪರಾಮರ್ಶಿಸಿ ತಜ್ಞರ ಸಲಹೆ ಪಡೆದು ಸರ್ಕಾರ ಕ್ರಮ ತೆಗೆದುಕೊಳ್ಳಲು ನನ್ನ ಅಭ್ಯಂತರವಿಲ್ಲ. ನನ್ನ ವೈಯಕ್ತಿಕ ಅಭಿಪ್ರಾಯದಲ್ಲಿ ಹೇಳುವುದಾದರೆ ಲಾಕ್ಡೌನ್ ಹೇರಬಾರದು. ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
The post ಕೋವಿಡ್ ನಿಯಂತ್ರಣಕ್ಕೆ ಲಾಕ್ಡೌನ್, ನೈಟ್ ಕರ್ಫ್ಯೂ ಪರಿಹಾರವಲ್ಲ- ಸಿ.ಟಿ ರವಿ appeared first on News First Kannada.