ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಆರೋಪದ ಮೇಲೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡವನ್ನು ವಿಧಿಸಿದೆ.

ಮೇ 31 ರಂದು ಸಂಜೆ ಡಿಕೆ ಶಿವಕುಮಾರ್ ಹುಬ್ಬಳ್ಳಿಗೆ ಭೇಟಿ ನೀಡಿದ್ದರು. ಕೇಶ್ವಾಪುರದ ಸರ್ವೋದಯ ವೃತ್ತದ ಬಳಿಯ ಮದರ್ ತೆರೆಸಾ ಪ್ರತಿಮೆ ಬಳಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಆ್ಯಂಬುಲೆನ್ಸ್, ಕೋವಿಡ್ ಸೇವಾ ವಾಹನ, ಆಕ್ಸಿಜನ್ ಇತ್ಯಾದಿ ಸೌಲಭ್ಯಗಳಿಗೆ ಚಾಲನೆ ನೀಡಿದ್ದರು.

ಆದರೆ ಕಾರ್ಯಕ್ರಮದ ವೇಳೆ ಜನಜಂಗುಳಿ ವಾತಾವರಣ ನಿರ್ಮಾಣವಾಗಿತ್ತು. ಸಾಮಾಜಿಕ ಅಂತರ ಕಾಪಾಡದ ಹಿನ್ನೆಲೆ, ಅನುಮತಿಯಿಲ್ಲದೆ ಬ್ಯಾನರ್, ಬಂಟಿಂಗ್ ಹಾಕಿದ ಆರೋಪದ ಮೇಲೆ ಮಹಾನಗರ ಪಾಲಿಕೆಯಿಂದ 10 ಸಾವಿರ ರೂಪಾಯಿ ದಂಡ ವಿಧಿಸಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿರುವದಾಗಿ ಪಾಲಿಕೆ ಪರಿಸರ ಎಂಜಿನಿಯರ್‌‌ ನಯನ ತಿಳಿಸಿದ್ದಾರೆ.

The post ಕೋವಿಡ್​ ನಿಯಮ ಉಲ್ಲಂಘನೆ; ಡಿಕೆ ಶಿವಕುಮಾರ್​ಗೆ ಬರೋಬ್ಬರಿ ₹10 ಸಾವಿರ ದಂಡ appeared first on News First Kannada.

Source: newsfirstlive.com

Source link