ಮಂಡ್ಯ: ಕೊರೊನಾ ವರದಿ ಇಲ್ಲ ಎಂದು ಹೆರಿಗೆ ನೋವಿನಿಂದ ಬಳಲುತ್ತಿದ ಗರ್ಭಿಣಿಯನ್ನು ದಾಖಲು ಮಾಡಿಕೊಳ್ಳಲು ಆಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದಾರೆ. ಪರಿಣಾಮ ಮಹಿಳೆ ಆಸ್ಪತ್ರೆಯ ಬಾಗಿಲಿನಲ್ಲೇ ಮಗುವಿಗೆ ಜನ್ಮ ನೀಡಿದ್ದು, ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ಮಂಡ್ಯ ಮಿಮ್ಸ್​ ಆಸ್ಪತ್ರೆಯಲ್ಲಿ ನಡೆದಿದೆ.

ಸೋನು ಹೆಸರಿನ ಗರ್ಭಿಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಇಂದು ಬೆಳಗ್ಗೆ 6 ಗಂಟೆ ಸಮಯದಲ್ಲಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಆಗಮಿಸಿದ್ದರು. ಆದರೆ ಮಹಿಳೆಯ ಕೋವಿಡ್​​ ವರದಿ ಇಲ್ಲದ ಕಾರಣ ಆಸ್ಪತ್ರೆಯ ಸಿಬ್ಬಂದಿ ಆಕೆಯನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸುಮಾರು 2 ಗಂಟೆಗಳ ಕಾಲ ಆಸ್ಪತ್ರೆಯ ಮುಂಭಾಗವೇ ಕಾದು ನಿಂತಿದ್ದ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ. ಮಹಿಳೆ ನಿಂತಿದ್ದ ಕಾರಣ ಹೆಣ್ಣು ಮಗು ಕೆಳಕ್ಕೆ ಬಿದ್ದಿದ್ದು, ಈ ವೇಳೆ ಹಸುಗೂಸಿನ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿದೆ ಎನ್ನಲಾಗಿದೆ.

ಘಟನೆಯಿಂದ ಆಕ್ರೋಶಗೊಂಡ ಪೋಷಕರು ಆಸ್ಪತ್ರೆಯ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಪ್ರತಭಟನೆ ನಡೆಸಿದ್ದಾರೆ. ಮಾನವೀಯತೆ ಮರೆತು ನಿರ್ಲಕ್ಷ್ಯ ತೋರಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಆಗ್ರಹಿಸಿದ್ದಾರೆ. ಮಂಡ್ಯ ಜಿಲ್ಲಾಸ್ಪತ್ರೆ ಹಾಗೂ ವಿಮ್ಸ್ ಆಸ್ಪತ್ರೆ ಎರಡು ಅಕ್ಕಪಕ್ಕದಲ್ಲೇ ಇದ್ದರೂ ಎರಡು ಆಸ್ಪತ್ರೆಗಳಲ್ಲಿ ಗರ್ಭಿಣಿಯನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ.

The post ಕೋವಿಡ್​ ರಿಪೋರ್ಟ್ ಇಲ್ಲದ್ದಕ್ಕೆ ಅಡ್ಮಿಟ್ ಮಾಡಿಕೊಳ್ಳದ ಸಿಬ್ಬಂದಿ; ಆಸ್ಪತ್ರೆ ಬಾಗಿಲಲ್ಲೇ ಹೆರಿಗೆ, ಮಗು ಸಾವು appeared first on News First Kannada.

Source: newsfirstlive.com

Source link