ದೆಹ್ರಾಡೂನ್: ಉತ್ತರಾಖಂಡ್ ಸರ್ಕಾರ ರಾಜ್ಯದಲ್ಲಿ ಕೊರೊನಾ ಕರ್ಫ್ಯೂವನ್ನು ಸೋಮವಾರದಿಂದ ವಿಸ್ತರಿಸಿದ್ದು, ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳವವರಿಗೆ ಕೋವಿಡ್-19 ನೆಗೆಟಿವ್ ವರದಿಯನ್ನು ತರಲು ಕಡ್ಡಾಯಗೊಳಿಸಿದೆ.

ಮೇ 18ರ ಬೆಳಗ್ಗೆ 6 ಗಂಟೆಗೆ ಮುಕ್ತಾಯವಾಗಬೇಕಿದ್ದ ಕೋವಿಡ್-19 ಕರ್ಫ್ಯೂ ಮೇ 25ರ ಬೆಳಗ್ಗೆ 6 ಗಂಟೆಯವರೆಗೂ ವಿಸ್ತರಿಸಲಾಗಿದೆ ಎಂದು ಕ್ಯಾಬಿನೆಟ್ ಸಚಿವರು ಮತ್ತು ರಾಜ್ಯ ಸರ್ಕಾರದ ಅಧಿಕೃತ ವಕ್ತಾರ ಸುಬೋಧ್ ಯುನಿಯಲ್ ತಿಳಿಸಿದ್ದಾರೆ.

ಮದುವೆ ಸಮಾರಂಭಗಳಲ್ಲಿ ಪಾಲ್ಗೊಳ್ಳುವ ಜನರು ತಮ್ಮ ಕೋವಿಡ್-19 ನೆಗೆಟಿವ್ ಪರೀಕ್ಷಾ ವರದಿಯನ್ನು ತೆಗೆದುಕೊಂಡು ಬರಬೇಕು. ಅದು 72 ಗಂಟೆಗಳಿಗಿಂತ ಒಳಗಿನದ್ದಾಗಿರಬೇಕು ಹಾಗೂ ಮದುವೆ ಸಮಾರಂಭಗಳಿಗೆ 20 ಮಂದಿಗೆ ಮಾತ್ರ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು 20 ಮಂದಿಗೆ ಮಾತ್ರ ಸೀಮಿತಗೊಳಿಸಲಾಗಿದೆ. ಅಲ್ಲದೇ ಶವಸಂಸ್ಕಾರಕ್ಕೆ ಹೋಗುವವರಿಗೆ ಆಡಳಿತವು ಕರ್ಫ್ಯೂ ಪಾಸ್ ನೀಡುವುದು ಅಗತ್ಯವಾಗಿದೆ. ಒಟ್ಟಾರೆ ಕೊರೊನಾ ಸೋಂಕನ್ನು ತಡೆಗಟ್ಟಲು ಕರ್ಫ್ಯೂ ವಿಸ್ತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

The post ಕೋವಿಡ್ ಕರ್ಫ್ಯೂ ವಿಸ್ತರಿಸಿದ ಉತ್ತರಾಖಂಡ್ – ಮದ್ವೆಯಲ್ಲಿ ಭಾಗಿಯಾಗಲು ರಿಪೋರ್ಟ್ ಕಡ್ಡಾಯ appeared first on Public TV.

Source: publictv.in

Source link