ಕೋವಿಡ್ ಕಷ್ಟ ಕಾಲದಲ್ಲೂ ಬಿಜೆಪಿ ಅಧಿಕಾರಕ್ಕಾಗಿ ಕಚ್ಚಾಟ: ಖಾದರ್

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆಗೆ ಕಚ್ಚಾಟ ನಡೆಸುತ್ತಿರುವುದು ಕೇವಲ ಅಧಿಕಾರಕ್ಕಾಗಿ, ಇದು ರಾಜ್ಯದ ಜನರಿಗೆ ಮಾಡುತ್ತಿರುವ ಅನ್ಯಾಯ ಎಂದು ಮಾಜಿ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದ ಜನ ಕೋವಿಡ್ ಭಯದಿಂದ ದಿನ ಕಳೆಯುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರಕ್ಕೆ ಜನರ ನೋವು, ಕಷ್ಟದ ಬಗ್ಗೆ ಕರುಣೆ ಇಲ್ಲ, ಅಧಿಕಾರ ಕಚ್ಚಾಟಕ್ಕೆ ಸಭೆ ಸೇರಿದರೆ ಇವರಿಗೆ ಕೋವಿಡ್ ನಿಯಮ ಅನ್ವಯ ಆಗುವುದಿಲ್ಲವೇ ಎಂದು ಪ್ರಶ್ನಿಸಿದರು.

ಬಿಜೆಪಿಯ ಈ ಕಚ್ಚಾಟದಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಗೌರವ, ಘನತೆಗೆ ಧಕ್ಕೆಯಾಗಿದೆ. ರಾಜಕೀಯ ಜಂಜಾಟವನ್ನು ಒಂದು ತಿಂಗಳು ಮುಂದೆ ಹಾಕಲಿ. ಈಗ ಕೊರೊನಾ ಸಮಯ, ಜನರ ಪ್ರಾಣ ಉಳಿಸುವತ್ತ ಚಿತ್ತ ಹರಿಸಲಿ ಎಂದರು.

The post ಕೋವಿಡ್ ಕಷ್ಟ ಕಾಲದಲ್ಲೂ ಬಿಜೆಪಿ ಅಧಿಕಾರಕ್ಕಾಗಿ ಕಚ್ಚಾಟ: ಖಾದರ್ appeared first on Public TV.

Source: publictv.in

Source link