ಕೋಲ್ಕತ್ತಾ: ಕೋವಿಡ್ ನಿಯಮವನ್ನು ಉಲ್ಲಂಘಿಸಿ ನಗರದ ಫೈ ಸ್ಟಾರ್ ಹೋಟೆಲ್‍ನಲ್ಲಿ ಪಾರ್ಟಿ ಮಾಡುತ್ತಿದ್ದ 37 ಮಂದಿಯನ್ನು ಕೋಲ್ಕತಾ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಕೋವಿಡ್ ನಿಯಮವನ್ನು ಮರೆತು ಹೋಟೆಲ್‍ನ ಎರಡನೇ ಹಾಗೂ ಮೂರನೇ ಮಹಡಿಯಲ್ಲಿ ತಡರಾತ್ರಿ 1.15ಕ್ಕೆ ಪಾರ್ಟಿ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ಮಾಡಿದ್ದಾರೆ.

ಈ ವೇಳೆ ಪೊಲೀಸರು ಆರೋಪಿಗಳಿಂದ ಎರಡು ಕಾರು, ಗಾಂಜಾ, ಮದ್ಯದ ಬಾಟಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ ಘಟನೆ ವೇಳೆ ವ್ಯಕ್ತಿಯೋರ್ವ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸದ್ಯ ಘಟನೆ ಸಂಬಂಧ ಭಾರತೀಯ ದಂಡ ಸಂಹಿತೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್‍ಗಳ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪಶ್ಚಿಮ ಬಂಗಾಳ ಸರ್ಕಾರವು ರಾಜ್ಯವ್ಯಾಪ್ತಿ ಜುಲೈ 15ರವರೆಗೆ ಕೋವಿಡ್ ನಿರ್ಬಂಧಗಳನ್ನು ವಿಸ್ತರಿಸಿದ್ದು, ರಾತ್ರಿ 9ರಿಂದ ಬೆಳಗ್ಗೆ 5ರವರೆಗೂ ಕರ್ಫ್ಯೂ ವಿಧಿಸಿದೆ. ಅಗತ್ಯ ವಸ್ತುಗಳನ್ನು ಹೊರತುಪಡಿಸಿ ಯಾವುದೇ ಚಟುವಟಿಕೆಗಳಿಗೆ ಅನುಮತಿ ನೀಡಲು ಆಗುತ್ತಿಲ್ಲ ಎಂದು ಸೂಚಿಸಿದೆ. ಇದನ್ನೂ ಓದಿ: ಫೇಸ್‍ಬುಕ್ ನಲ್ಲಿ ಪರಿಚಯ – 2.50 ಲಕ್ಷ ರೂ. ಯುವಕನಿಗೆ ಪಂಗನಾಮ

The post ಕೋವಿಡ್ ರೂಲ್ಸ್ ಬ್ರೇಕ್ ಮಾಡಿ ಪಾರ್ಟಿ – 37 ಮಂದಿ ಬಂಧನ appeared first on Public TV.

Source: publictv.in

Source link