ಹುಬ್ಬಳ್ಳಿ: ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಯುವಕನೊಬ್ಬ ಹಲ್ಲೆ ಮಾಡಿದ ಘಟನೆ ಧಾರವಾಡ ಜಿಲ್ಲೆಯ ಹಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ.

ಹಳ್ಳಿಗೇರಿ ಗ್ರಾಮ ಪಂಚಾಯತಿ ಪಿಡಿಒ ಮೃತ್ಯುಂಜಯ ಮೆಣಸಿನಕಾಯಿ ಅವರೇ ಹಲ್ಲೆಗೊಳಗಾದ ವ್ಯಕ್ತಿ. ಪಿಡಿಒ ಬುದ್ಧಿವಾದ ಹೇಳಿದ್ದಕ್ಕೆ ಪುಂಡ ಯುವಕನೊಬ್ಬ ಅವರ ಮೇಲೆ ಹಲ್ಲೆ ಮಾಡಿದ್ದಾನೆ.

ಗ್ರಾಮದ ಮೈದಾನದಲ್ಲಿ ಕೆಲ ಯುವಕರು ಕ್ರಿಕೆಟ್ ಆಡುತ್ತಿದ್ದರು. ಈ ವೇಳೆ ಲಾಕ್‍ಡೌನ್ ಇದೆ, ಕ್ರಿಕೆಟ್ ಆಡಬೇಡಿ, ಮನೆಗೆ ಹೋಗಿ, ಎಲ್ಲರೂ ಮಾಸ್ಕ್ ಧರಿಸಿಕೊಳ್ಳಿ ಎಂದು ಹೇಳಿದ್ದಕ್ಕೆ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ವೀಡಿಯೋ ಇದೀಗ ವೈರಲ್ ಆಗಿದೆ.

The post ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕ್ಕೊಳ್ಳಿ ಎಂದಿದ್ದಕ್ಕೆ ಪಿಡಿಒ ಮೇಲೆ ಯುವಕನಿಂದ ಹಲ್ಲೆ appeared first on Public TV.

Source: publictv.in

Source link