ಕ್ರಿಪ್ಟೋ ಕರೆನ್ಸಿಗೂ ಕಾನೂನಾತ್ಮಕ ಸ್ಟೇಟಸ್; ಸೀತಾರಾಮನ್ ನೇತೃತ್ವದಲ್ಲಿ ಇಂದು ಮಹತ್ವದ ಸಭೆ


ನವದೆಹಲಿ: ಇಂದು ಹಣಕಾಸು ಸಚಿವಾಲಯದಿಂದ ಕ್ರಿಪ್ಟೋ ಕರೆನ್ಸಿ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಸ್ಟ್ಯಾಂಡಿಂಗ್ ಕಮಿಟಿ ಆನ್ ಫಿನಾನ್ಸ್​​ನಿಂದ ಚರ್ಚೆ ನಡೆಯಲಿದೆ.

ಈಗಾಗಲೇ ಭಾರತದಲ್ಲಿ 10ಕೋಟಿಗೂ ಅಧಿಕ ಮಂದಿ ಹೂಡಿಕೆದಾರರಿದ್ದಾರೆ. ಇವರಿಂದ ಒಟ್ಟು 8 ಸಾವಿರ ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹೂಡಿಕೆ ಆಗಿದೆ. ವಿಶ್ವದಲ್ಲೇ ಅತಿ ಹೆಚ್ಚು ಕ್ರಿಪ್ಟೋಕರೆನ್ಸಿ ಬಳಕೆದಾರರು ಭಾರತದಲ್ಲಿ ಇದ್ದಾರೆ. ಮುಂದಿನ ದಿನಗಳಲ್ಲಿ ಕ್ರಿಪ್ಟೋ ಕರೆನ್ಸಿ ದೈನಂದಿನ ಬಳಕೆಯ ಕನಸು ನನಸಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಕ್ರಿಪ್ಟೋ ಕರೆನ್ಸಿಗೂ ಕಾನೂನಾತ್ಮಕ ಸ್ಟೇಟಸ್ ನೀಡಲು ಕೇಂದ್ರ ಸರ್ಕಾರ ಚಿಂತನೆ ಮಾಡಿದೆ ಎನ್ನಲಾಗಿದೆ.

ಪ್ರತಿ ಟ್ರಾನ್ಸಾಕ್ಷ್​​ನ್ ಮೇಲೂ ಜಿಎಸ್​ಟಿ ತರುವ ಬಗ್ಗೆ ಕೇಂದ್ರ ಸರ್ಕಾರ ಚಿಂತನೆ ಮಾಡಿದ್ಯಂತೆ. ಮುಂಬರುವ ಅಧಿವೇಶನದಲ್ಲಿ ಈ ಬಗ್ಗೆ ಕಾನೂನು ಮಂಡನೆ ಸಾಧ್ಯತೆ ಇದೆ ಎನ್ನಲಾಗಿದೆ. ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ವ್ಯಕ್ತವಾದ ಆತಂಕ ಏನು..?
ಈ ಸಭೆಯಲ್ಲಿ ಕ್ರಿಪ್ಟೋಕರೆನ್ಸಿಗೆ ಸಂಬಂಧಿಸಿ ಕಾನೂನು ತರುವ ಬಗ್ಗೆ ಗಂಭೀರ ಚರ್ಚೆ ನಡೆಸಲಾಗಿದೆ. ಇದಕ್ಕೆ ಅಂತಾರಾಷ್ಟ್ರೀಯ ಎಕ್ಸಪರ್ಟ್​ಗಳನ್ನೂ ಸಂಪರ್ಕಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜೊತೆಗೆ ಕ್ರಿಪ್ಟೋಕರೆನ್ಸಿ ಹೂಡಿಕೆ, ಕಾನೂನು ಬಾಹಿರ ಚಟುವಟಿಕೆ ಬಗ್ಗೆಯೂ ಆತಂಕ ವ್ಯಕ್ತವಾಗಿದೆ. ಭಯೋತ್ಪಾದನೆಗೂ ಬಳಕೆಯಾಗುವ ಸಾಧ್ಯತೆ ಬಗ್ಗೆ ಗಂಭೀರ ಚರ್ಚೆ ಆಗಿದೆ. ಹೆಚ್ಚಿನ ಲಾಭದ ಆಸೆ ತೋರಿಸುವ ಜಾಹಿರಾತಿನ ಬಗ್ಗೆಯೂ ಗಮನ ಹಾಗೂ ಹೂಡಿಕೆದಾರರ ಹಿತ ಕಾಯುವ ನಿಟ್ಟಿನಲ್ಲಿ ಹೊಸ ಕಾನೂನು ಅವಶ್ಯಕ ಅನ್ನೋದ್ರ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ ಎನ್ನಲಾಗಿದೆ.

ಸಿಎಂಗಳ ಜೊತೆ ಸೀತಾರಾಮನ್ ಸಭೆ
ಮತ್ತೊಂದು ಕಡೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಣಕಾಸು ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ವಿತ್ತ ಸಚಿವಾಲಯದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ಆರ್ಥಿಕತೆಯನ್ನು ಉತ್ತೇಜಿಸಲು ಮತ್ತು ಖಾಸಗಿ ಹೂಡಿಕೆಯನ್ನು ಆಕರ್ಷಿಸುವ ಸಲುವಾಗಿ ಚರ್ಚೆ ನಡೆಸಲಾಗುತ್ತಿದ್ದು, ಕೋವಿಡ್ ಮಹಾಮಾರಿಯ ಎರಡು ಅಲೆಗಳ ನಂತರ ಆರ್ಥಿಕತೆಯು ವೇಗವಾಗಿ ಮರಳುತ್ತಿರುವ ಹಿನ್ನೆಲೆಯಲ್ಲಿ ಸಭೆ ಮಾಡಲಾಗುತ್ತಿದೆ ಎಂದು ಹಣಕಾಸು ಸಚಿವಾಲಯದ ಕಾರ್ಯದರ್ಶಿ ಟಿ.ವಿ. ಸೋಮನಾಥನ್ ತಿಳಿಸಿದ್ದಾರೆ.

News First Live Kannada


Leave a Reply

Your email address will not be published.