ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟ ಕಮಲ್ ಹಾಸನ್ ಅವರಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಚೆನ್ನೈ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವಿಟರ್ನಲ್ಲಿ ಮಾಹಿತಿ ಹಂಚಿಕೊಂಡ ಅವರು, ಅಮೇರಿಕಾದ ಪ್ರವಾಸದಿಂದ ಹಿಂತಿರುಗಿದ ನಂತರ ಸ್ವಲ್ಪ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಜೊತೆಗೆ ಕೆಮ್ಮು ಶುರುವಾಗಿತ್ತು. ಹೀಗಾಗಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿದಾಗ ಕೋವಿಡ್ ತಗುಲಿರುವುದು ಖಾತ್ರಿಯಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಂಡು ನಾನು ಆಸ್ಪತ್ರೆಯಲ್ಲಿ ದಾಖಲಾಗಿದ್ದೇನೆ ಎಂದು ಕಮಲ್ ಹಾಸನ್ ಬರೆದುಕೊಂಡಿದ್ದಾರೆ.
அமெரிக்கப் பயணம் முடிந்து திரும்பிய பின் லேசான இருமல் இருந்தது. பரிசோதனை செய்ததில் கோவிட் தொற்று உறுதியானது. மருத்துவமனையில் தனிமைப்படுத்திக் கொண்டுள்ளேன். இன்னமும் நோய்ப்பரவல் நீங்கவில்லையென்பதை உணர்ந்து அனைவரும் பாதுகாப்பாக இருங்கள்.
— Kamal Haasan (@ikamalhaasan) November 22, 2021