ಕನ್ನಡದ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕನಸಿನ ಯೋಜನೆಯಾದ ‘ಗಂಧದ ಗುಡಿ’ಯ ಟೀಸರ್ ಬಿಡುಗಡೆಯಾಗಿದೆ. ‘ಗಂಧದಗುಡಿ’ ಡಾಕ್ಯುಮೆಂಟರಿಯನ್ನು ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ತಮ್ಮ ಪಿಆರ್ಕೆ ಆಡಿಯೋನಲ್ಲಿ ಬಿಡುಗಡೆ ಮಾಡಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ಅವರು ನಮ್ಮೆಲ್ಲರ ಪ್ರೀತಿಯ ಅಪ್ಪು ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ.