ಮೈಸೂರು: ರಾಜ್ಯದಲ್ಲಿ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಸ್ಯಾಂಡಲ್‍ವುಡ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದಾರೆ.

ಮೊದಲಿನಿಂದಲೂ ನಟ ದರ್ಶನ್‍ಗೆ ಪ್ರಾಣಿ-ಪಕ್ಷಿಗಳೆಂದರೆ ಬಹಳ ಪ್ರೀತಿ. ಇದಕ್ಕೆ ಸಾಕ್ಷಿ ಎಂಬಂತೆ ದರ್ಶನ್ ಮೈಸೂರಿನ ಮೃಗಾಲಯದಲ್ಲಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ ಮತ್ತು ತಮ್ಮ ಫಾರ್ಮ್ ಹೌಸ್‍ನಲ್ಲಿ ಹಲವಾರು ಪ್ರಾಣಿ, ಪಕ್ಷಿಗಳನ್ನು ಸಾಕಿದ್ದಾರೆ. ಅಲ್ಲದೆ ಬಿಡುವಿದ್ದಾಗಲೆಲ್ಲಾ ಸಫಾರಿಗೆ ಕೂಡ ಹೋಗುತ್ತಾರೆ.

ಸದ್ಯ ರಾಜ್ಯಾದ್ಯಂತ ಕೊರೊನಾ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ನಟ ದರ್ಶನ್‍ರವರ ತವರೂರಾದ ಸಾಂಸ್ಕøತಿಕ ನಗರಿ ಮೈಸೂರಿನ ದತ್ತಾನಗರದಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಕಾಲ ಕಳೆಯುತ್ತಿದ್ದಾರೆ. ಅಲ್ಲದೆ ಆಶ್ರಮದಲ್ಲಿರುವ ಗಿಣಿಗಳನ್ನು ದರ್ಶನ್ ಆರೈಕೆ ಮಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆಶ್ರಮದಲ್ಲಿನ ಶುಕವನಕ್ಕೆ ತೆರಳಿರುವ ದರ್ಶನ್, ಗಣಪತಿ ಸಚ್ಚಿದಾನಂದ ಶ್ರೀಗಳ ಜೊತೆ ಕುಶಾಲೋಪರಿ ಮಾತುಕತೆ ನಡೆಸುತ್ತಿರುವುದನ್ನು ಫೋಟೋಗಳಲ್ಲಿ ಕಾಣಬಹುದಾಗಿದೆ. ಜನತಾ ಕಫ್ರ್ಯೂ ಆರಂಭವಾದಗಲಿಂದಲೂ ದರ್ಶನ್‍ರವರು ಮೈಸೂರಿನಲ್ಲಿಯೇ ನೆಲೆಸಿದ್ದಾರೆ.

The post ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ದರ್ಶನ್ ಭೇಟಿ appeared first on Public TV.

Source: publictv.in

Source link