ಗಣರಾಜ್ಯೋತ್ಸವ ದಿನಾಚರಣೆಗೆ ರಾಜ್ಯದ ಸ್ತಬ್ಧಚಿತ್ರ ಆಯ್ಕೆ-ಸಿಎಂ ಬೊಮ್ಮಾಯಿ ಸಂತಸ


ಬೆಂಗಳೂರು: ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆನಂದ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿ ಮಾಹಿತಿ ನಿಡಿದ ಅವರು ‘ಕರ್ನಾಟಕ ಪಾರಂಪರಿಕ ಕರಕುಶಲ ವಸ್ತುಗಳ ತೊಟ್ಟಿಲು ಎಂಬ ವಿಷಯಾಧಾರಿತ ರಾಜ್ಯದ ಸ್ತಬ್ಧಚಿತ್ರ ಈ ಬಾರಿಯ ಗಣರಾಜ್ಯೋತ್ಸವ ದಿನಾಚರಣೆಗೆ ಆಯ್ಕೆಯಾಗಿರುವುದು ಸಂತಸದ ಸಂಗತಿ’ಎಂದಿದ್ದಾರೆ.

ಸತತವಾಗಿ 13ನೇ ಬಾರಿ ರಾಜ್ಯದ ಸ್ತಬ್ಧಚಿತ್ರ ಆಯ್ಕೆಯಾಗಿದ್ದು, 12 ರಾಜ್ಯಗಳ ಪೈಕಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಕರ್ನಾಟಕದ್ದು ಎಂಬ ಹೆಗ್ಗಳಿಕೆಗೆ ರಾಜ್ಯ ಪಾತ್ರವಾಗಿದೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

News First Live Kannada


Leave a Reply

Your email address will not be published. Required fields are marked *