ಗದಗ: ಅಂಗಡಿ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ನಡೆದಿದೆ. ಗದಗ ನಗರದ ಬಸವೇಶ್ವರ ಸರ್ಕಲ್ ಬಳಿ ಮಾರ್ಕೆಟ್ನ ಎಂಎಂ ನರೇಗಲ್ ಟ್ರೇಡರ್ಸ್ ಅಂಡ್ ಜನರಲ್ ಸ್ಟೋರ್ಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕೂಡಲೇ ಅಂಗಡಿ ಮಾಲೀಕ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಪ್ರಯತ್ನಿಸಿದ್ದರು. ಆದರೆ ನೋಡ ನೋಡುತ್ತಿದ್ದಂತೆಯೇ ಬೆಂಕಿಯ ಜ್ವಾಲೆ ಜೋರಾಗಿದೆ. ಪರಿಣಾಮ ಅಂಗಡಿಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ.
ವಿಷಯ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳೀಯರು ಕರೆ ಮಾಡಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ಸಕಾಲಕ್ಕೆ ಆಗಮಿಸಿಲ್ಲ ಅನ್ನೋ ಆರೋಪ ಕೇಳಿಬಂದಿದೆ. ವಿದ್ಯುತ್ ಅವಘಡದಿಂದ ಬೆಂಕಿ ಅನಾಹುತ ಉಂಟಾಗಿರುವ ಶಂಕೆ ವ್ಯಕ್ತವಾಗಿದೆ.