ಗದಗ: ಮೂಲತಃ ಗದಗ ಜಿಲ್ಲೆಯವರಾದ ವಿಶ್ವನಾಥ್ ಸಜ್ಜನರ್ ಸದ್ಯ ತೆಲಂಗಾಣ ರಾಜ್ಯದ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಿರಿಯ ಐಪಿಎಸ್ ಅಧಿಕಾರಿಯಾದ ವಿಶ್ವನಾಥ ಸಜ್ಜನರ್ ಅವರು ಕೋವಿಡ್ ಸೋಂಕು ನಿಯಂತ್ರಣಕ್ಕೆ ಅಗತ್ಯವಾಗಿರುವ ಸುಮಾರು 40 ಲಕ್ಷ ರೂಪಾಯಿ ಮೌಲ್ಯದ ವೈದ್ಯಕೀಯ ಔಷಧಿ ಸಾಮಾಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ಕಳುಹಿಸುವ ಮೂಲಕ ವೈದ್ಯಕೀಯ ನೆರವು ನೀಡಿದ್ದಾರೆ.

22 ಆಕ್ಸಿಜನ್ ಕಾನ್ಸನ್ ಟ್ರೇಟರ್, 84 ಆಕ್ಸಿಜನ್ ಸಿಲಿಂಡರ್, 2 ಸಾವಿರ ಕೋವಿಡ್ ಕಿಟ್, 20 ಸಾವಿರ ಮಾಸ್ಕ್, 200 ಲೀಟರ್ ಸ್ಯಾನಿಟೈಸರ್, 1 ಸಾವಿರ ಫೇಸ್‍ಶೀಲ್ಡ್, 24 ಯುನಿಟ್ ರೆಮ್‍ಡೆಸಿವಿರ್ ಸೇರಿದಂತೆ ಇತರೆ ಔಷಧಿ ಸಾಮಗ್ರಿಗಳನ್ನು ಗದಗ ಜಿಲ್ಲಾಡಳಿತಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ: ಪಶುವೈದ್ಯೆ ರೇಪ್ ಮರ್ಡರ್ ಕೇಸ್ – ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

ಹಿರಿಯ ಐಪಿಎಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ಸಹೋದರ, ಹುಬ್ಬಳ್ಳಿಯ ಸಾಯಿ ಮಲ್ಟಿಸ್ಪೆಷಾಲಿಟಿ ಕ್ಲಿನಿಕ್‍ನ ಡಾ.ಎಂ.ಸಿ.ಸಜ್ಜನರ ಅವರು ಜಿಲ್ಲಾಡಳಿತದ ಭವನದ ಆವರಣದಲ್ಲಿ ವೈದ್ಯಕೀಯ ಔಷಧಿ ಸಾಮಾಗ್ರಿಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿ.ಇ.ಓ ಭರತ್, ಡಿ.ಎಚ್.ಓ ಸತೀಶ್ ಬಸರಿಗಿಡದ್ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಪಿಸ್ತೂಲ್ ಕಸಿದುಕೊಂಡು ಪೊಲೀಸರ ಮೇಲೆ ಹಲ್ಲೆ ಎಸಗಿದ್ದಕ್ಕೆ ಗುಂಡೇಟು – ಕನ್ನಡದಲ್ಲಿ ವಿವರಿಸಿದ ಸಜ್ಜನರ್

The post ಗದಗ ಜಿಲ್ಲೆಗೆ ವೈದ್ಯಕೀಯ ನೆರವು ನೀಡಿದ ತೆಲಂಗಾಣ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ appeared first on Public TV.

Source: publictv.in

Source link