ಗಾಂಧೀಜಿ ಹೋರಾಟವನ್ನು ಕೀಳಾಗಿ ಕಂಡ ಕಂಗನಾರನ್ನು ಸ್ವಚ್ಛ ಭಾರತ ಅಭಿಯಾನಕ್ಕೆ ಬಳಸಿಕೊಳ್ಳಿ: ಕೆಪಿವೈಸಿಸಿ ಅಧ್ಯಕ್ಷ ರಕ್ಷಾ ರಾಮಯ್ಯ | KPYCC President Raksha Ramaiah Sedition Complaint against Kangana Ranaut

ಗಾಂಧೀಜಿ ಹೋರಾಟವನ್ನು ಕೀಳಾಗಿ ಕಂಡ ಕಂಗನಾರನ್ನು ಸ್ವಚ್ಛ ಭಾರತ ಅಭಿಯಾನಕ್ಕೆ ಬಳಸಿಕೊಳ್ಳಿ: ಕೆಪಿವೈಸಿಸಿ ಅಧ್ಯಕ್ಷ ರಕ್ಷಾ ರಾಮಯ್ಯ

ಕಂಗನಾ ವಿರುದ್ಧ ದೂರು ದಾಖಲು

ಬಾಲಿವುಡ್ ನಟಿ ಕಂಗನಾ ರಣಾವತ್ ಸದಾ ವಿವಾದಗಳ ಮೂಲಕ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ ಅವರು ನೀಡಿರುವ ಹೇಳಿಕೆ ಮತ್ತೆ ತೀವ್ರ ವಿವಾದ ಸೃಷ್ಟಿಸಿತ್ತು. ‘1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು‌’ ಎಂದು ಕಂಗನಾ ಹೇಳಿದ್ದರು. ಈ ಹೇಳಿಕೆಯನ್ನು ಅನೇಕರು ಬೆಂಬಲಿಸಿದ್ದರು. ಈ ಹೇಳಿಕೆಗೆ ಸಂಬಂಧಿಸಿ ಕಾಂಗ್ರೆಸ್​ ತೀವ್ರ ವಿರೋಧ ವ್ಯಕ್ತಪಡಿಸಿದೆ. ನಟಿ ಕಂಗನಾ ರಣಾವತ್ ವಿರುದ್ಧ ಕೆಪಿವೈಸಿಸಿ ದೇಶ ದ್ರೋಹ ದೂರು ದಾಖಲಿಸಿದೆ.

ಕೆಪಿವೈಸಿಸಿ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದ ಯುವ ಕಾಂಗ್ರೆಸ್​​ನ ಕಾನೂನು ಘಟಕ ಕಂಗನಾ ರಣಾವತ್ ವಿರುದ್ಧ ಕ್ರಮಕ್ಕೆ ಮನವಿ ಮಾಡಿದೆ.  ದೂರು ದಾಖಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಎಂ.ಎಸ್. ರಕ್ಷಾ ರಾಮಯ್ಯ, ‘ದೇಶ 75ನೇ ಸ್ವಾತಂತ್ರ್ಯೋತ್ಸವದ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಿಸುತ್ತಿರುವ ಸಂದರ್ಭದಲ್ಲಿ ನಟಿ ಕಂಗನಾ ರಣಾವತ್ ಮಾಡಿರುವ ಟೀಕೆಯಿಂದ ಭಾರತದ ಕೀರ್ತಿಗೆ ದೇಶ ವಿದೇಶಗಳಲ್ಲಿ ಧಕ್ಕೆಯಾಗಿದೆ. ಇವರ ವಿರುದ್ಧ ಈವರೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ. ಕಂಗನಾ ರಣಾವತ್ ನಿಜವಾದ ದೇಶ ಭಕ್ತೆಯಾಗಿದ್ದರೆ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಜಾದಿ ಕಾ ಅಮೃತ್ ಮಹೋತ್ಸವದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕಮಾಡಿಕೊಳ್ಳುವುದು ಸೂಕ್ತ’ ಎಂದು ಕಿಡಿ ಕಾರಿದರು.

‘ಕಂಗನಾ ರಣಾವತ್ ಅವರು ಹೇಳಿರುವುದು ಸೂಕ್ತ ಎಂದು ಕಂಡು ಬಂದಲ್ಲಿ ಮೋದಿ ಸರ್ಕಾರ ಬೇಕಿದ್ದರೆ ಅವರನ್ನು ನವ ಭಾರತದ ರಾಯಭಾರಿಯನ್ನಾಗಿ ನೇಮಕ ಮಾಡಿಕೊಳ್ಳಲಿ. ಗಾಂಧೀಜಿ ಅವರ ಹೋರಾಟವನ್ನು ಅತ್ಯಂತ ಕೀಳು ಮಟ್ಟದಿಂದ ಧಿಕ್ಕರಿಸಿರುವ ಈ ನಟಿಯನ್ನು ಸ್ವಚ್ಛ ಭಾರತ ಅಭಿಯಾನಕ್ಕೆ ಬೇಕಿದ್ದರೆ ಬಳಸಿಕೊಳ್ಳಲಿ. ಸ್ವಚ್ಛತಾ ಅಭಿಯಾನದಲ್ಲಿ ಮಹಾತ್ಮ ಗಾಂಧೀಜಿ ಕನ್ನಡಕದ ಲೋಗೋ ತೆಗೆದು ಕಂಗನಾ ರಾಣಾವತ್ ಲೋಗೋ ಬೇಕಿದ್ದರೆ ಹಾಕಿಕೊಳ್ಳಲಿ’ ಎಂದು ರಕ್ಷಾ ರಾಮಯ್ಯ ವ್ಯಂಗ್ಯವಾಡಿದರು.

‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಇನ್ನೂ ಹಲವು ವೀರ ಸ್ವಾತಂತ್ರ್ಯ ಹೋರಾಟಗಾರರು ಈಗಲೂ ನಮ್ಮ ಜತೆ ಬದುಕಿದ್ದಾರೆ. ಇಂತಹ ದೇಶ ದ್ರೋಹಿಗಳನ್ನು ಮುಂದಿಟ್ಟುಕೊಂಡು ‘ಆಜಾದಿ ಕಾ ಅಮೃತ್ ಮಹೋತ್ಸವ್’ ಕಾರ್ಯಕ್ರಮವನ್ನು ಹೇಗೆ ಮುಂದುವರೆಸುತ್ತೀರಿ ಎಂದು ಅವರು ಪ್ರಶ‍್ನಿ ಮಾಡಿದ್ದಾರೆ.

‘ಇದೇ ರೀತಿಯಲ್ಲಿ ಭಾರತದ ಸಾರ್ವಭೌಮತ್ವವನ್ನು ಪ್ರಶ್ನಿಸಿರುವ ಅಜಿತ್ ಬಾರ್ತಿ ವಿರುದ್ಧವೂ ಸಹ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಯುವ ಕಾಂಗ್ರೆಸ್ ತನ್ನ ಹೋರಾಟ ತೀವ್ರಗೊಳಿಸಲಿದೆ’ ಎಂದು ರಕ್ಷಾ ರಾಮಯ್ಯ ಎಚ್ಚರಿಸಿದ್ದಾರೆ.

ಇದನ್ನು ಓದಿ: ಖಲಿಸ್ತಾನಿಗಳನ್ನು ಮಹಿಳಾ ಪ್ರಧಾನಿ ಸೊಳ್ಳೆಗಳಂತೆ ಹೊಸಕಿ ಹಾಕಿದ್ದರು ಎಂದ ಕಂಗನಾ ವಿರುದ್ಧ ದೂರು; ಜೈಲಿಗೆ ಹಾಕಲು ಆಗ್ರಹ

‘ಭಗತ್​ ಸಿಂಗ್​ಗೆ ಗಲ್ಲು ಶಿಕ್ಷೆ ಆಗ್ಬೇಕು ಅಂತ ಗಾಂಧಿ ಬಯಸಿದ್ದರು ಎಂಬುದಕ್ಕೆ ಸಾಕ್ಷಿಗಳಿವೆ’: ಕಂಗನಾ

TV9 Kannada

Leave a comment

Your email address will not be published. Required fields are marked *