ಗಾನ ಕೋಗಿಲೆ ಲತಾ ಮಂಗೇಶ್ಕರ್ ಇನ್ನಿಲ್ಲ


ಮುಂಬೈ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (93) ಅವರು ಇಂದು ಮುಂಬೈನ ಬ್ರಿಚ್​ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಸೋಂಕು ತಗುಲಿ ಕಳೆದ ಒಂದು ತಿಂಗಳಿನಿಂದ ಮುಂಬೈನ ಬ್ರಿಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾದೊಂದಿಗೆ ನ್ಯೂಮೋನಿಯದಿಂದ ಬಳಲುತ್ತಿದ್ದ ಅವರ ಆರೋಗ್ಯ ಗಂಭೀರವಾಗಿದೆ ಎಂದು ನಿನ್ನೆ ವೈದ್ಯರು ಮಾಹಿತಿ ನೀಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಲತಾ ಮಂಗೇಶ್ಕರ್  ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರತದ ನೈಟಿಂಗೇಲ್ ಎಂದೇ ಕರೆಸಿಕೊಳ್ತಿದ್ದ ಲತಾ ಮಂಗೇಶ್ಕರ್ ಅವರು ತಮ್ಮ 13ನೇ ವಯಸ್ಸಿಗೆ ಸಿನಿಮಾದಲ್ಲಿ ಹಾಡುವುದನ್ನ ಪ್ರಾರಂಭಿಸಿದ್ದರು. ಇದುವರೆಗೂ 36ಕ್ಕೂ ಹೆಚ್ಚು ಭಾಷೆಗಳಲ್ಲಿ ಹಾಡಿರುವ ಗಾನ ಕೋಗಿಲೆ, 50 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ.

News First Live Kannada


Leave a Reply

Your email address will not be published.