ಗುಜರಾತ್ ಚುನಾವಣಾ ರ್ಯಾಲಿಗಳಿಗೆ ಮುಂಚಿತವಾಗಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೋದಿ – PM Narendra Modi visits iconic Somnath temple in Gujarat addresses a rally in Veeraval


ಇಂದು ಗುಜರಾತ್‌ನ ವೆರಾವಲ್‌ನಲ್ಲಿ  ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ   ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಸಾಧಿಸುವ ತಮ್ಮ ಕನಸನ್ನು ನನಸಾಗಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು

ಗುಜರಾತ್ ಚುನಾವಣಾ ರ್ಯಾಲಿಗಳಿಗೆ ಮುಂಚಿತವಾಗಿ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಮೋದಿ

ಸೋಮನಾಥ ದೇವಾಲಯದಲ್ಲಿ ಪ್ರಾರ್ಥಿಸುತ್ತಿರುವ ಮೋದಿ

ಗುಜರಾತ್ ತಲುಪಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಚಾರ ರ್ಯಾಲಿ ಆರಂಭಿಸುವ ಮುನ್ನ ಸೋಮನಾಥ ದೇವಾಲಯಕ್ಕೆ (Somnath temple) ಭೇಟಿ ನೀಡಿದ್ದಾರೆ. ದೇವಾಲಯದ ದರ್ಶನದ ನಂತರ ಅವರು ವೆರಾವಲ್​​ನಲ್ಲಿ(Veeraval)  ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ವೆರಾವಲ್ ಮೀನುಗಾರಿಕೆ ಉದ್ಯಮಗಳ ಕೇಂದ್ರವಾಗಿದೆ. ಇದಾದ ನಂತರ ಧೋರಾಜಿ, ಅಮ್ರೇಲಿ ಮತ್ತು ಬೊಟಾಡ್‌ನಲ್ಲಿ ಇನ್ನೂ ಮೂರು ಚುನಾವಣಾ ರ್ಯಾಲಿಗಳು ನಡೆಯಲಿವೆ.ಸುದ್ದಿ ಸಂಸ್ಥೆ ಎಎನ್‌ಐ ಟ್ವೀಟ್ ಮಾಡಿರುವ ವಿಡಿಯೊದಲ್ಲಿ ಮೋದಿ ಅವರು ಸೋಮನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು ತೋರಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಕೂಡಾ ಗುಜರಾತ್ ನಲ್ಲಿದ್ದಾರೆ. ಗುಜರಾತ್ ನಲ್ಲಿ ಎರಡು ಹಂತಗಳಾಗಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಮತದಾನ ನಡೆಯಲಿದೆ.ಡಿಸೆಂಬರ್ 8 ರಂದು ಮತಗಳ ಎಣಿಕೆ ನಡೆಯಲಿದೆ. ಹಿಮಾಚಲ ಪ್ರದೇಶದ ಮತಗಳ ಎಣಿಕೆಯೂ ಅದೇ ದಿನ ನಡೆಯಲಿದೆ.

ಭೂಪೇಂದ್ರ ಅವರಿಗಾಗಿ ನರೇಂದ್ರ ಕೆಲಸ ಮಾಡುತ್ತಿದ್ದಾರೆ

ಇಂದು ಗುಜರಾತ್‌ನ ವೆರಾವಲ್‌ನಲ್ಲಿ  ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ   ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಗೆಲುವು ಸಾಧಿಸುವ ತಮ್ಮ ಕನಸನ್ನು ನನಸಾಗಿಸಬೇಕು ಎಂದು ಮತದಾರರಿಗೆ ಮನವಿ ಮಾಡಿದರು. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, “ಈ ಬಾರಿ ಪ್ರತಿ ಮತಗಟ್ಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಿ” ಮತ್ತು “ಪ್ರತಿ ಮತಗಟ್ಟೆಯಲ್ಲಿ ದಾಖಲೆಗಳನ್ನು ಮುರಿಯುವಂತೆ” ಮತದಾರರನ್ನು ಕೇಳಿಕೊಂಡರು.

ಪ್ರಧಾನಿ ತಮ್ಮ ಭಾಷಣದಲ್ಲಿ, ‘ಭೂಪೇಂದ್ರ ಅವರು ದಾಖಲೆಗಳನ್ನು ಮಾಡುವುದಕ್ಕಾಗಿ ನರೇಂದ್ರ ಕೆಲಸ ಮಾಡುತ್ತಿದ್ದಾರೆ’ ಎಂದು ಹೇಳಿದರು.

ಅಭಿವೃದ್ಧಿ ಕುರಿತು ಮಾತನಾಡಿದ ಮೋದಿ, ಬಿಜೆಪಿ ನೇತೃತ್ವದ ಗುಜರಾತ್ ಸರ್ಕಾರವು ರಾಜ್ಯದಲ್ಲಿ ಬಂದರುಗಳನ್ನು ಅಭಿವೃದ್ಧಿಪಡಿಸಿದೆ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸಿದೆ. ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಮತ್ತಷ್ಟು ಅಭಿವೃದ್ಧಿಗೆ ಶ್ರಮಿಸುತ್ತದೆ ಎಂದು ಹೇಳಿದರು.

ರೈತರಿಗಾಗಿ ಹೊಸ ನೀತಿಗಳ ಭರವಸೆಯನ್ನೂ ನೀಡಿದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.