ವಿಜಯನಗರ: ಜಿಲ್ಲೆಯಲ್ಲಿ ಇಂದು ಏಕಾಏಕಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ ವೇಳೆ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.

ರಾಜಶೇಖರ (33), ಚಿನ್ನಾಪುರಿ (40), ವೀರಣ್ಣ (50), ಪತ್ರೆಪ್ಪ (43) ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಘಟನಾ ಸ್ಥಳಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡ್ಲಿಗಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಾವುಗಳು ಸಂಭವಿಸಿವೆ.

The post ಗುಡುಗು ಸಮೇತ ಭಾರೀ ಮಳೆ- ಬಳ್ಳಾರಿಯಲ್ಲಿ ಸಿಡಿಲಿಗೆ ನಾಲ್ವರು ಬಲಿ appeared first on News First Kannada.

Source: newsfirstlive.com

Source link