ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಮುಂದೂಡಿಕೆ | MLA Ramesh Jarkiholi has postponed the press conference about Santosh Patil Suicide case


ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ; ಶಾಸಕ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ಮುಂದೂಡಿಕೆ

ರಮೇಶ್ ಜಾರಕಿಹೊಳಿ

ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ (Santhosh Patil Suicide) ಪ್ರಕರಣಕ್ಕೆ ಸಂಬಂಧಿಸಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಇಂದು (ಏಪ್ರಿಲ್ 18) ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದ್ದರು. ಆದರೆ ತನಿಖಾ ಹಂತದಲ್ಲಿ ಸುದ್ದಿಗೋಷ್ಠಿ ನಡೆಸದಂತೆ ಬಿಜೆಪಿ ವರಿಷ್ಠರು ಸೂಚನೆ ನೀಡಿದ ಹಿನ್ನೆಲೆ ಸುದ್ದಿಗೋಷ್ಠಿಯನ್ನು ಮುಂದೂಡಿದ್ದಾರೆ. ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿಯಲ್ಲಿ ಮಹಾನಾಯಕನ ಷಡ್ಯಂತ್ರದ ಬಗ್ಗೆ ತಿಳಿಸುವುದಾಗಿ ಹೇಳಿದ್ದರು. ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದಾಖಲೆ ಬಿಡುಗಡೆ ಮಾಡುವಂತೆ ಸವಾಲ್ ಹಾಕಿದ್ದರು. ಸದ್ಯ ಬಿಜೆಪಿ ವರಿಷ್ಠರು ಸೂಚಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಜಾರಕಿಹೊಳಿ ಸಿಡಿಸಿದ್ದ ಹೊಸ ಬಾಂಬ್:
ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ತನಿಖೆಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ್ರೆ ರಾಜೀನಾಮೆ ನೀಡಲಿ. ಅಲ್ಲಿಯವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಸಂತೋಷ್ ಪ್ರಕರಣದ ಬಗ್ಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದರು.

ನಂತರ ಸೋಮವಾರ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸುತ್ತೇನೆ. ಹೈಕಮಾಂಡ್ ಅನುಮತಿ ಪಡೆದು ಸುದ್ದಿಗೋಷ್ಠಿ ನಡೆಸುತ್ತೇನೆ. ಸುದ್ದಿಗೋಷ್ಠಿ ನಡೆಸಿ ಷಡ್ಯಂತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡುವೆ. ಸಿಡಿ ಕೇಸ್, ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆ ಆಗಲಿ. ಎರಡೂ ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಯಲಿ. ನಾನು ಕಾಂಗ್ರೆಸ್‌ನಲ್ಲಿದ್ದಾಗಲೂ ಸಂತೋಷ್ ನನ್ನ ಜತೆಯಲ್ಲಿದ್ರು ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದರು.

ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಮಾಡಿದ್ದರು. ಹೆಸರು ಹೇಳದೇ ‘ಮಹಾನ್‌ ನಾಯಕ’ನೆಂದು ಹೇಳಿ ಆರೋಪ ಮಾಡಿದ್ದರು. ನನ್ನ ಸಿಡಿ ತಯಾರಿಸಿದ ‘ಮಹಾನ್‌ ನಾಯಕ’ನೇ ಇದರಲ್ಲೂ ಭಾಗಿಯಾಗಿದ್ದಾರೆ. ಸಂತೋಷ್ ಕೇಸ್‌ನಲ್ಲೂ ‘ಮಹಾನ್‌ ನಾಯಕ’ ಭಾಗಿಯಾಗಿದ್ದಾರೆ ಎಂದಿದ್ದರು. ಆದರೆ ಆ ಮಹಾನ್ ನಾಯಕ ಯಾರು ಎನ್ನುವುದು ಸುದ್ದಿಗೋಷ್ಠಿ ನಡೆಸಿದ ಬಳಿಕವಷ್ಟೇ ತಿಳಿದುಬರಬೇಕಿದೆ.

TV9 Kannada


Leave a Reply

Your email address will not be published.