ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ ಮಾಹಿತಿ ಏನು?


ಬೆಂಗಳೂರು: ಬಿಡಿಎ ಅಧ್ಯಕ್ಷ ಎಸ್​.ಆರ್​.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ ಆರೋಪ ಕೇಳಿಬಂದಿದೆ. ಈ ವಿಚಾರದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ನ್ಯೂಸ್​ಫಸ್ಟ್​ಗೆ ಪ್ರತಿಕ್ರಿಯಿಸಿ.. ವಿಶ್ವನಾಥ್‌ ಹತ್ಯೆಗೆ ಸಂಚು ನಡೆದಿತ್ತು ಅನ್ನೋ ವಿಷಯ ಗೊತ್ತಾಗಿತ್ತು. ಈ ಸಂಬಂಧ ರಾತ್ರಿಯೇ ಅಧಿಕಾರಿಗಳು ಕೆಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.

ಹಿರಿಯ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ವಿಚಾರಣಾ ಹಂತದಲ್ಲಿ ಇದೆ, ಈಗಲೇ ಹೇಳಲು ಆಗಲ್ಲ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

ಎಸ್​.ಆರ್.ವಿಶ್ವನಾಥ್​ ಅವರ ಹತ್ಯೆಗೆ ಕಾಂಗ್ರೆಸ್​ ನಾಯಕ ಗೋಪಾಲಕೃಷ್ಣ ಸಂಚು ರೂಪಿಸಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಿಡಿಯೋ ಒಂದು ವೈರಲ್​ ಆಗಿದ್ದು, ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

News First Live Kannada


Leave a Reply

Your email address will not be published. Required fields are marked *