ಸಮಾವೇಶಕ್ಕೆ ಆಗಮಿಸುತ್ತಿರುವ ಯತ್ನಾಳ್‌ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಹೋರಾಟದ ಹೊರತುಪಡಿಸಿ ಸತೀಶ್ ಜಾರಕಿಹೊಳಿ ಕುರಿತು ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸತೀಶ್ ಜಾರಕಿಹೊಳಿ ಬೆಂಬಲಿಗರು
ಬೆಳಗಾವಿ: ಗೋಕಾಕ್ನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಶಾಸಕ ಯತ್ನಾಳ್‌ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ. 2ಎ ಮೀಸಲಾತಿಗೆ ಪಂಚಮಸಾಲಿ ಸಮುದಾಯ ಹೋರಾಟ ವಿಚಾರಕ್ಕೆ ಸಂಬಂಧಿಸಿ ಜಿಲ್ಲೆಯ ಗೋಕಾಕ್ ನಗರದ ನ್ಯೂ ಇಂಗ್ಲಿಷ್ ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 1ಕ್ಕೆ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯಶ್ರೀ ನೇತೃತ್ವದಲ್ಲಿ ಈ ಸಮಾವೇಶ ನಡೆಯಲಿದ್ದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಯತ್ನಾಳ್, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ವಿನಯ್ ಕುಲಕರ್ಣಿ ಸೇರಿ ಹಲವರು ಭಾಗಿಯಾಗಲಿದ್ದಾರೆ.
ಇನ್ನು ಸಮಾವೇಶಕ್ಕೆ ಆಗಮಿಸುತ್ತಿರುವ ಯತ್ನಾಳ್‌ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಎಚ್ಚರಿಕೆ ಸಂದೇಶ ನೀಡಿದ್ದಾರೆ. ಹೋರಾಟದ ಹೊರತುಪಡಿಸಿ ಸತೀಶ್ ಜಾರಕಿಹೊಳಿ ಕುರಿತು ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಾನಸಿಕ ಅಸ್ವಸ್ಥ ಯತ್ನಾಳ್, ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಮಾತನಾಡಿದ ಹಾಗೇ ಇಲ್ಲಿ ಏನಾದ್ರೂ ಗೋಕಾಕ್ನಲ್ಲಿ ಮಾತನಾಡಿದರೆ ಗೋಕಾಕ್ ಬಿಟ್ಟು ಹೋಗುವುದು ಕಠಿಣ ಆಗುತ್ತೆ ಎಂದಿದ್ದಾರೆ.