ಗೋಕಾಕ್​​ನಲ್ಲಿ ಯುವಕನ ಬರ್ಬರ ಹತ್ಯೆ; ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಗೋಕಾಕ್​​ನಲ್ಲಿ ಯುವಕನ ಬರ್ಬರ ಹತ್ಯೆ; ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ

ಬೆಳಗಾವಿ: ಯುವಕನೋರ್ವನನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಗೋಕಾಕ್​​ನಲ್ಲಿ ನಡೆದಿದೆ. ಗೋಕಾಕ್ ಹೊರವಲಯ ಮಹಾಂತೇಶ ನಗರದಲ್ಲಿ ಘಟನೆ ನಡೆದಿದ್ದು, ಮೃತ ವ್ಯಕ್ತಿಯನ್ನು ಮಂಜು ಶಂಕರ ಮುರಕಿಭಾವಿ (22) ಎಂದು ಗುರುತಿಸಲಾಗಿದೆ.

ಮಂಜುರನ್ನು ತಡರಾತ್ರಿ ಮಾರಾಕಾಸ್ತ್ರಗಳಿಂದ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇಂದು ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಮಂಜು ಗ್ಯಾರೇಜ್​​ವೊಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಇನ್ನು, ಗೋಕಾಕ್​​​ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಜು ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಆರೋಪಿಗಳಿಗಾಗಿ ಪೊಲೀಸರು ಶೋಧಕಾರ್ಯ ಮುಂದುವರಿಸಿದ್ದಾರೆ.

ಇದನ್ನೂ ಓದಿ: ವಿಧವಾ ವೇತನ ಕೇಳಿ ಬಂದ ಮಹಿಳೆ ಮುಂದೆ ಪ್ಯಾಂಟ್​​ ಕಳಚಿದ್ನಾ ತಹಶೀಲ್ದಾರ್..?

The post ಗೋಕಾಕ್​​ನಲ್ಲಿ ಯುವಕನ ಬರ್ಬರ ಹತ್ಯೆ; ಆರೋಪಿಗಳಿಗಾಗಿ ಪೊಲೀಸರ ಹುಡುಕಾಟ appeared first on News First Kannada.

Source: newsfirstlive.com

Source link