ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ₹10 ಕೋಟಿ ಅನುದಾನ -ಸಿಎಂ ಭರವಸೆ


ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನವನ್ನ ಬಿಡುಗಡೆ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಸಿಎಂ ಈ ಭರವಸೆ ನೀಡಿದ್ದಾರೆ.

ಇದೆ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನೇತೃತ್ವದಲ್ಲಿ ಗೋವಾ ಕನ್ನಡ ಮಹಾಸಂಘ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತು. ಮಹಾ ಸಂಘದ ಅಧ್ಯಕ್ಷ ಹನುಮಂತರೆಡ್ಡಿ ಶಿರೂರ್, ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬದಾಮಿ, ಮಹೇಶ್ ಬಾಬು ಸುರ್ವೇ, ಅರುಣ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

News First Live Kannada


Leave a Reply

Your email address will not be published. Required fields are marked *