ನವದೆಹಲಿ: ಆಮ್ ಆದ್ಮಿ ಪಕ್ಷ ಗೋವಾದಲ್ಲಿ ಅಧಿಕಾರಕ್ಕೆ ಬಂದಲ್ಲಿ 18 ವರ್ಷಕ್ಕೂ ಮೇಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಳೂ 1,000 ರೂಪಾಯಿ ನೀಡುವುದಾಗಿ ಪಕ್ಷದ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
ಗೋವಾದಲ್ಲಿ 2022 ರಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಆಮ್ ಆದ್ಮಿ ಪಕ್ಷ ಅಲ್ಲಿ ಅಧಿಕಾರ ಹಿಡಿಯಲು ಯತ್ನಿಸುತ್ತಿದೆ. ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಕೇಜ್ರಿವಾಲ್, ಮಹಿಳೆಯರಿಗೆ ಹಲವು ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದು, ಗೃಹ ಆಧಾರ್ ಫಲಾನುಭವಿಗಳಿಗೆ ಪ್ರತಿ ತಿಂಗಳು ನೀಡಲಾಗುತ್ತಿರುವ ಮೊತ್ತವನ್ನು 1,500 ರಿಂದ 2,500 ರೂಪಾಯಿಗೆ ಏರಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.