ಬೆಂಗಳೂರು: ರಾಮಮೂರ್ತಿ ನಗರದಲ್ಲಿ ನಡೆದಿದ್ದ ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಯಾಂಗ್ ರೇಪ್ ಆರೋಪಿಗಳು ಮತ್ತು ಸಂತ್ರಸ್ತೆ ಅಕ್ರಮವಾಗಿ ಭಾರತಕ್ಕೆ ಬಂದಿರುವುದು ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿ ಎನ್​ಐಎ(ರಾಷ್ಟ್ರೀಯ ತನಿಖಾ ಸಂಸ್ಥೆ) ಪ್ರತ್ಯೇಕ ಎಫ್ ಐ ಆರ್ ದಾಖಲು ಮಾಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧ 13 ಮಂದಿ ಆರೋಪಿಗಳನ್ನ ರಾಮೂರ್ತಿನಗರ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: ಗ್ಯಾಂಗ್​ ರೇಪ್​; ಬಾಂಗ್ಲಾ ಕಾಮುಕರ ಬಳಿ ಇತ್ತು ಆಧಾರ್ ಕಾರ್ಡ್.. ಈ ಸವಲತ್ತು ಕೊಟ್ಟಿದ್ಯಾರು?!

ಈ ಹಿನ್ನೆಲೆಯಲ್ಲಿ ಆರೋಪಿಗಳ ಮತ್ತು ಸಂತ್ರಸ್ತೆಯ ವಿವರ, ದಾಖಲೆ ಬಗ್ಗೆ ಎನ್​ಐಎ ಮಾಹಿತಿ ಕಲೆ ಹಾಕಿತ್ತು. ಈ ವೇಳೆ ಆರೋಪಿಗಳು ಅಕ್ರಮವಾಗಿ ಮಹಿಳೆಯರನ್ನು ಕಳ್ಳಸಾಗಣೆ ಮಾಡಿರುವುದು ಪತ್ತೆಯಾಗಿದ್ದಲ್ಲದೆ, ತಾವು ಕೂಡ ಅಕ್ರಮವಾಗಿ ಭಾರತಕ್ಕೆ ಬಂದಿರುವ ಸಂಗತಿ ಬಯಲಿಗೆ ಬಿದ್ದಿದೆ.

ಇದನ್ನೂ ಓದಿ: ಬಾಂಗ್ಲಾಕೇಸ್ ಬೆನ್ನು ಹತ್ತಿದ ಪೊಲೀಸರಿಗೆ ಶಾಕ್; ಆರೋಪಿಗಳು ಬಾಯ್ಬಿಟ್ಟ ಸತ್ಯವೇನು..?

ಇದೇ ವರ್ಷ ಮೇ ೨೭ ರಂದು ಬಾಂಗ್ಲಾ ಮೂಲದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬಳಿಕ ಈ ಬಗ್ಗೆ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪ್ರಕರಣದ ಸಂಬಂಧ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದಿರುವ ಎನ್​ಐಎ ಅಧಿಕಾರಿಗಳು, ಆರೋಪಿಗಳ ದಾಖಲಾತಿಗಳನ್ನು ಪರಿಶೀಲಿಸಿ ತನಿಖೆ ಕೈಗೆತ್ತಿಕೊಳ್ಳುವ ಸಾಧ್ಯತೆಗಳು ದಟ್ಟವಾಗಿದೆ. ಗೃಹ ಸಚಿವಾಲಯ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

The post ಗ್ಯಾಂಗ್ ರೇಪ್ ಪ್ರಕರಣ: ಪ್ರತ್ಯೇಕ ಎಫ್​​ಐಆರ್​​ ದಾಖಲಿಸಿದ ರಾಷ್ಟ್ರೀಯ ತನಿಖಾ ದಳ appeared first on News First Kannada.

Source: newsfirstlive.com

Source link