ಬೆಂಗಳೂರು: ಗ್ಯಾಸ್ ಗೀಸರ್ ಅನಿಲ ಸೋರಿಕೆ ತಾಯಿ, ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ನಡೆದಿದೆ.
35 ವರ್ಷದ ಮಂಗಳ, 7 ವರ್ಷದ ಮಗು ಗೌತಮಿ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಗೀಸರ್ ಬಳಸಿ ಸ್ನಾನ ಮಾಡುವಾಗ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮಂಗಳ ಅವರ ಪತಿ ನರಸಿಂಹಮೂರ್ತಿ ಕೆಲಸಕ್ಕೆ ತೆರಳಿದ್ದಾಗ ಅವಘಡ ಸಂಭವಿಸಿದೆ. ಮನೆ ಮಾಲಕಿ ಗಾಯಿತ್ರಿ ಮನೆ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಮೃತರು 15 ವರ್ಷದ ಹಿಂದೆ ರಾಮನಗರದಿಂದ ಬಂದು ನಗರದಲ್ಲಿ ವಾಸವಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.