ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌ | Minister Dr K Sudhakar Sings a Song in Grama Vastavya Meeting


ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌

ಗೌರಿಬಿದನೂರು ತಾಲ್ಲೂಕು ಪುರ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಸಭೆಯಲ್ಲಿ ಸಚಿವ ಡಾ.ಸುಧಾಕರ ಹಾಡಿದರು

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ ಮಯೂರ ಸಿನಿಮಾದ ಹಾಡು ಹೇಳಿ ಜನರನ್ನು ರಂಜಿಸಿದರು. ಗೌರಿಬಿದನೂರು ತಾಲ್ಲೂಕು ಪುರ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯದ ಸಭೆಯಲ್ಲಿ ‘ನಾನಿರುವುದೇ ನಿಮಗಾಗಿ’ ಹಾಡು ಹಾಡಿದರು. ಸಚಿವರು ಹಾಡುವಾಗ ಜನರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.

ಗೌರಿಬಿದನೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ಸಚಿವ ಕೆ.ಸುಧಾಕರ್ ಅವರೊಂದಿಗೆ ಜಿಲ್ಲಾಧಿಕಾರಿ ಆರ್.ಲತಾ ಸಹ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಶನಿವಾರ ಸಂಜೆಯಿಂದ ಭಾನುವಾರ ಮುಂಜಾನೆಯವರೆಗೆ ಗ್ರಾಮವಾಸ್ತವ್ಯ ಮುಂದುವರಿಯಲಿದ್ದು, ಸಚಿವರು ಮತ್ತು ಜಿಲ್ಲಾಧಿಕಾರಿ ಗ್ರಾಮಸ್ಥರ ದೂರು ಆಲಿಸಲಿದ್ದಾರೆ.

ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾಮಂಡಲ
ಗೌರಿಬಿದನೂರು ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲವಾದರು. ವೈದ್ಯಾಧಿಕಾರಿ ರತ್ನಮ್ಮ ಅವರನ್ನು ತರಾಟೆಗೆ ತೆಗೆದುಕೊಂಡರು. ರೋಗಿಗಳು, ಸ್ಥಳೀಯರಿಂದ ಹಲವು ದೂರು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಚಿವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಸಕ್ಕರೆ ಕಾಯಿಲೆ ಹಾಗೂ ಬಿಪಿ ಸಂಬಂಧಿತ ಔಷಧಿಗಳು ಇಲ್ಲ ಎಂದು ತಿಳಿಸಿದ ಸಿಬ್ಬಂದಿ, ಅಗತ್ಯ ಔಷಧಿಗಳ ಪೂರೈಕೆಗೆ ಮನವಿ ಮಾಡಿದರು. ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದ ಸಚಿವರು ಯಾಕೆ ಮಾತ್ರೆಗಳ ಸರಬರಾಜು ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉಪಚುನಾವಣೆ ಸೋಲಿಗೂ ತೈಲ ಬೆಲೆ ಇಳಿಗೂ ಸಂಬಂಧವಿಲ್ಲ: ಸಚಿವ ಡಾ ಕೆ ಸುಧಾಕರ
ಇದನ್ನೂ ಓದಿ: ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ

TV9 Kannada


Leave a Reply

Your email address will not be published. Required fields are marked *