ಗ್ಲೋಬಲ್ ಲೀಡರ್ ರೇಟಿಂಗ್ಸ್; ಮೋದಿಯೇ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದ ನಂತರ ಅವರ ಜನಪ್ರಿಯತೆ ನಿರಂತರವಾಗಿ ಹೆಚ್ಚುತ್ತಲೇ ಇದೆ. ಮಾರ್ನಿಂಗ್ ಕನ್ಸಲ್ಟ್ ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಟ್ರ್ಯಾಕರ್ ಪ್ರಕಾರ ಈ ವರ್ಷವೂ ಅವರು ವಿಶ್ವದ ಅಗ್ರ ನಾಯಕನ ಸ್ಥಾನ ಉಳಿಸಿಕೊಂಡಿದ್ದಾರೆ.

ಹಾಗೆ ಮತ್ತಷ್ಟು ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಅಮೆರಿಕಾ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಸೇರಿದಂತೆ ವಿಶ್ವದ ಹಲವು ನಾಯಕರನ್ನು ಮೋದಿ ಹಿಂದಿಕ್ಕಿದ್ದಾರೆ. ಗ್ಲೋಬಲ್ ಲೀಡರ್ ಟ್ರ್ಯಾಕರ್‌ನಲ್ಲಿ ಮೋದಿ ಅತ್ಯಧಿಕ ಅಂದರೆ ಶೇಕಡಾ.70 ರೇಟಿಂಗ್​ಅನ್ನು ಪಡೆದುಕೊಂಡಿದ್ದಾರೆ.

ಸಮೀಕ್ಷೆಯಲ್ಲಿ ಮೆಕ್ಸಿಕೋ ಅಧ್ಯಕ್ಷ ಲೋಪೇಜ್ ಒಬ್ರಡಾರ್ ಶೇಕಡಾ- 66% ಪ್ರತಿಶತದೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಇಟಲಿಯ ಪ್ರಧಾನಿ ಮಾರಿಯೋ ಡ್ರಾಗಿ-58% ಮೂರನೇ ಸ್ಥಾನದಲ್ಲಿದ್ದರೆ, ಜರ್ಮನ್ ಚಾನ್ಸೆಲರ್ ಏಂಜೆಲಾ ಮಾರ್ಕೆಲ್-54%, ಯುಎಸ್ ಅಧ್ಯಕ್ಷ ಜೋ ಬೈಡನ್-44% ರೊಂದಿಗೆ ಆರನೇ ಸ್ಥಾನ ಪಡೆದಿದ್ದಾರೆ.

News First Live Kannada


Leave a Reply

Your email address will not be published. Required fields are marked *