ತೆಲಂಗಾಣ: ಸಿಂಗರೇನಿ ಕಲಿಯೇರೀಸ್ ಕಂಪನಿ ಲಿಮಿಟೆಡ್ (ಎಸ್‍ಸಿಸಿಎಲ್)ನ ಕಲ್ಲಿದ್ದಲು ಗಣಿ ಯೋಜನೆಯ ಮೇಲ್ಛಾವಣಿ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ನಡೆದಿದೆ
ಶ್ರೀರಾಂಪುರ ಪ್ರದೇಶದಲ್ಲಿ ಮೇಲ್ಛಾವಣಿ ಹೊದಿಸುತ್ತಿರುವಾಗ ಈ ಘಟನೆ ಸಂಭವಿಸಿದೆ. ನಾಲ್ವರು ಕಾರ್ಮಿಕರ ಮೇಲೆ ಮೇಲ್ಛಾವಣಿಯ ಒಂದು ಭಾಗ ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು SCCL ಅಧಿಕಾರಿಗಳು ತಿಳಿಸಿದ್ದಾರೆ.
ಈ ಕುರಿತಂತೆ ಎಸ್‍ಸಿಸಿಎಲ್‍ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎನ್.ಶ್ರೀಧರ್ ಅವರು, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು, ತನಿಖೆ ನಡೆಸುವಂತೆ ಪೊಲೀಸರುಗೆ ಹೇಳಿದ್ದಾರೆ. ಈ ಸಂಬಂಧ ಉನ್ನತ ಅಧಿಕಾರಿಗಳು ಸಂತ್ರಸ್ತರ ಕುಟುಂಬದ ಒಬ್ಬ ಅರ್ಹ ಸದಸ್ಯರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದಾರೆ. ಜೊತೆಗೆ 70 ಲಕ್ಷದಿಂದ 1 ಕೋಟಿ ನಡುವೆ ಪರಿಹಾರ ಘೋಷಿಸಿದ್ದಾರೆ.