ಚಂದ್ರಶೇಖರ್ ಸಾವು ಪ್ರಕರಣ: ತಂದೆ ರಮೇಶ್ ದೂರಿನ ಮೇರೆಗೆ ಎಫ್​ಐಆರ್ ದಾಖಲು​ – Chandrasekhar death case: FIR file on father Ramesh’s complaint


ಚಂದ್ರಶೇಖರ್​ ತಂದೆ ರಮೇಶ್ ದೂರಿನ ಮೇರೆಗೆ ಜಿಲ್ಲೆಯ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್​ 302, 201 ಹಾಗೂ 427ರಡಿ ಪ್ರಕರಣ ದಾಖಲಿಸಲಾಗಿದೆ.

ಚಂದ್ರಶೇಖರ್ ಸಾವು ಪ್ರಕರಣ: ತಂದೆ ರಮೇಶ್ ದೂರಿನ ಮೇರೆಗೆ ಎಫ್​ಐಆರ್ ದಾಖಲು​

ತಂದೆ ರಮೇಶ್,
ಮೃತ ಚಂದ್ರಶೇಖರ್

TV9kannada Web Team

| Edited By: ಗಂಗಾಧರ್​ ಬ. ಸಾಬೋಜಿ

Nov 04, 2022 | 7:41 PM
ದಾವಣಗೆರೆ: ಬಿಜೆಪಿ ಶಾಸಕ ರೇಣುಕಾಚಾರ್ಯ ತಮ್ಮನ ಮಗ ಸಾವು ಪ್ರಕರಣ ಹಿನ್ನೆಲೆ ಚಂದ್ರಶೇಖರ್ (Chandrasekhar) ​ ತಂದೆ ರಮೇಶ್ ದೂರಿನ ಮೇರೆಗೆ ಜಿಲ್ಲೆಯ ಹೊನ್ನಾಳಿ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್​ 302, 201 ಹಾಗೂ 427ರಡಿ ಪ್ರಕರಣ ದಾಖಲಿಸಲಾಗಿದೆ. ಮೃತ ದೇಹದ ಕೈ-ಕಾಲು ಬಟ್ಟೆಯಿಂದ ಕಟ್ಟಿ ಹಾಕಿದ್ದು, ಕವಿಗಳಿಗೆ ಹೊಡೆದಿರುವ ಗುರುತುಗಳು ಮೃತ ದೇಹದಲ್ಲಿ ಪತ್ತೆಯಾಗಿವೆ. ತಲೆಗೆ ಆಯುಧಗಳಿಂದ ಹೊಡೆದಿರುವ, ದೇಹದ ಉಳಿದ ಭಾಗದಲ್ಲಿ ಹೊಡೆದಿರುವ ಬಗ್ಗೆ ಗುರುತು ಪತ್ತೆಯಾಗಿರುವುದರ ಬಗ್ಗೆ ಎಫ್​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ನನ್ನ ಮಗನನ್ನ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಿ ಮೃತದೇಹವನ್ನ ಕಾರಿನಲ್ಲಿ ಇರಿಸಿ ಕಾರು ಜಖಂಗೊಳಿಸಿದ್ದಾರೆ. ಕಾರಿನ ಸಮೇತ ಚಾನಲ್​ಗೆ ತಳ್ಳಿದ್ದಾರೆ ಎಂದು ರಮೇಶ್​ ಉಲ್ಲೇಖಸಿದರು.

ತಾಜಾ ಸುದ್ದಿ

TV9 Kannada


Leave a Reply

Your email address will not be published.