ಚನ್ನಪ್ಪಟ್ಟಣ: ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್​ ಮುಖಂಡನಿಂದ ಹಲ್ಲೆ | JDS leader attacked on BJP activist in channapatna


ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್​ ಮುಖಂಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಚನ್ನಪ್ಪಟ್ಟಣ: ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್​ ಮುಖಂಡನಿಂದ ಹಲ್ಲೆ

ಹಲ್ಲೆಗೊಳಗಾದ ಬಿಜೆಪಿ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ ಸಿ ಪಿ ಯೋಗೇಶ್ವರ

ರಾಮನಗರ: ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್​ ಮುಖಂಡ ಹಲ್ಲೆ ಮಾಡಿದ್ದಾರೆ. ಚನ್ನಪಟ್ಟಣದ ಬಸ್ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತ ಸಿದ್ದನಹಳ್ಳಿ ನಿವಾಸಿ ಸಿದ್ದೇಗೌಡ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದಾನೆ. ಜೆಡಿಎಸ್ ಮುಖಂಡ ಹಾಗೂ ಗುತ್ತಿಗೆದಾರ ನಾಗರಾಜ್ ಹಾಗೂ ಬೆಂಬಲಿಗರು ಹಲ್ಲೆ ಮಾಡಲಾಗಿದೆ.

ಸಿದ್ದೇಗೌಡನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕು ಆಸ್ಪತ್ರೆಗೆ ಮಾಜಿ ಸಚಿವ ಸಿ‌ ಪಿ ಯೋಗೇಶ್ವರ್ ಭೇಟಿ ನೀಡಿ, ಗಾಯಾಳು ಸಿದ್ದೇಗೌಡ ಯೋಗಕ್ಷೇಮ ವಿಚಾರಿಸಿದ್ದಾರೆ. ಸಿದ್ದೇಗೌಡ, ಗುತ್ತಿಗೆದಾರ ನಾಗರಾಜು ಅವರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಮೂಲಕ ಮಾಹಿತಿ ಕೇಳಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ‌ ನಡೆದು ಹಲ್ಲೆ ಮಾಡಲಾಗಿದೆ. ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.