ಬಳ್ಳಾರಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ KA 34, F 1228 ನಂಬರ್ನ KSRTC ಬಸ್ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಬಗ್ಗೆ ಪೊಲೀಸರಿಗೆ ಯಾವುದೇ ಗುರುತು ಪತ್ತೆಯಾಗಿಲ್ಲ.

ಚಲಿಸುತ್ತಿದ್ದ KSRTC ಬಸ್ ಬಾಗಿಲ ಬಳಿ ನಿಂತು ಪ್ರಯಾಣ: ಆಯತಪ್ಪಿ ಬಿದ್ದ ಮಹಿಳೆ ಸಾವು
ಬಳ್ಳಾರಿ: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಿಂದ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ವೇಣಿ ವೀರಾಪುರದ ಹೆದ್ದಾರಿಯಲ್ಲಿ ನಡೆದಿದೆ. ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಅವಘಡ ಸಂಭವಿಸಿದೆ.
ಬಳ್ಳಾರಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ KA 34, F 1228 ನಂಬರ್ನ KSRTC ಬಸ್ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಬಗ್ಗೆ ಪೊಲೀಸರಿಗೆ ಯಾವುದೇ ಗುರುತು ಪತ್ತೆಯಾಗಿಲ್ಲ. ಸದ್ಯ ವಿವರ ಕಲೆ ಹಾಕಲಾಗುತ್ತಿದೆ. ಕುಡತಿನಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಬಿದ್ದ ಸಾರಿಗೆ ಬಸ್
ಚಿಕ್ಕೋಡಿ: ಬ್ರೇಕ್ ಫೇಲ್ ಆಗಿ ರಸ್ತೆ ಪಕ್ಕದ ಗುಂಡಿಗೆ ಸಾರಿಗೆ ಬಸ್ ಬಿದ್ದಿರುವಂತಹ ಘಟನೆ ನಡೆದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಘಟನೆ ನಡೆದಿದೆ. ಅಥಣಿ ಘಟಕಕ್ಕೆ ಸೇರಿದ ಸಾರಿಗೆ ಬಸ್ ಇದಾಗಿದ್ದು, ಅಥಣಿಯಿಂದ ಸಾವಳಗಿ ಗ್ರಾಮಕ್ಕೆ ಹೋಗುತ್ತಿತ್ತು. 35ಕ್ಕೂ ಹೆಚ್ಚು ಜನ ಬಸ್ನಲ್ಲಿ ಪ್ರಯಾಣಿಸುತ್ತಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಐಗಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.