ಮೈಸೂರು: ನಿನ್ನೆ ರಾತ್ರಿ 12.30ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ಮಂದಿ ಮೃತಪಟ್ಟಿದ್ದಾರೆ ಎಂಬ ಎಂಬ ಗಂಭೀರ ಆರೋಪಕ್ಕೆ ಮೈಸೂರು ಜಿಲ್ಲಾಡಳಿತ ಪ್ರತಿಕ್ರಿಯೆ ನೀಡಿದೆ.

ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ. ಸರಿಯಾದ ಸಮಯದಲ್ಲಿ ಬಂದಿದ್ದೇಯಾ ಇಲ್ಲವೋ ಗೊತ್ತಿಲ್ಲ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಆದರೆ ನಿನ್ನೆ ರಾತ್ರಿ 12:30ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗಿದೆ ಎಂದು ತಿಳಿಸಿದೆ

ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ. ನಾವು ಅಧಿಕೃತವಾಗಿ 250 ಆಕ್ಸಿಜನ್ ಸಿಲಿಂಡರ್ ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿರೋದು ದಾಖಲೆಯಲ್ಲಿದೆ. ಮೈಸೂರಿನ ಸೌತ್ರನ್ ಗ್ಯಾಸ್‍ನಿಂದ 210 ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಗ್ಯಾಸ್ ಸಿಲಿಂಡರ್ ಚಾಮರಾಜನಗರಕ್ಕೆ ನಿನ್ನೆ ಮಧ್ಯರಾತ್ರಿಯೆ ರವಾನೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಡಳಿತ ಸ್ಪಷನೆ ನೀಡಿದೆ.

ಚಾಮರಾಜನಗರಕ್ಕೆ 250 ಆಕ್ಸಿಜನ್ ಸಿಲಿಂಡರ್ ಕಳಿಸಿದ್ದೇವೆ ಎನ್ನುತ್ತಿದೆ ಮೈಸೂರು ಜಿಲ್ಲಾಡಳಿತ. ಹಾಗಾದರೆ ತಪ್ಪು ಯಾರಾದು? ಲಿಕ್ವಿಡ್ ಆಕ್ಸಿಜನ್ ಬರೋದು ವಿಳಂಬವಾಗಿದ್ದೇ ಸಾವಿಗೆ ಕಾರಣವಾ? ಲಿಕ್ವಿಡ್ ಆಕ್ಸಿಜನ್ ತರಿಸಿಕೊಳ್ಳೋ ವಿಚಾರದಲ್ಲಿ ಸರಿಯಾದ ಪ್ಲಾನ್ ಮಾಡಲಿಲ್ವಾ ಚಾಮರಾಜ ನಗರ ಡಿಸಿ? ಡಿಸಿ ಬೇಜವಾಬ್ದಾರಿ ತನಕ್ಕೆ ಬಲಿಯಾದ್ರಾ ಅಮಾಯಕ ಜನ? ಅಥವಾ ಮೈಸೂರು – ಚಾಮರಾಜ ನಗರ ಡಿಸಿಗಳ ನಡುವಿನ ಹೊಂದಾಣಿಕೆ ಕೊರತೆಗೆ ಬಲಿಯಾದ್ರಾ ಅಮಾಯಕರು ಎನ್ನುವ ಪ್ರಶ್ನೆಗಳು ಎದ್ದಿದೆ.

ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. 24 ಮಂದಿ ಸಾವನ್ನಪ್ಪಿರುವುದನ್ನು ಖಚಿತಪಡಿಸಿದ ಆರೋಗ್ಯಾಧಿಕಾರಿಗಳು. ನಿನ್ನೆ ರಾತ್ರಿ 16, ಬೆಳಗಿನ ಜಾವ 6 ಕ್ಕು ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಆಕ್ಸಿಜನ್ ಕೊರತೆಯಿಂದ ಬಲಿಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿದ್ದು ಎಂದು ರೋಗಿಗಳ ಸಂಬಂಧಿಕರ ಆರೋಪ ಜಿಲ್ಲಾಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

The post ಚಾಮರಾಜನಗರಕ್ಕೆ 250 ಆಕ್ಸಿಜನ್ ಸಿಲಿಂಡರ್ ಕಳಿಸಲಾಗಿದೆ – ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ appeared first on Public TV.

Source: publictv.in

Source link