ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆ ಬೆನ್ನಲ್ಲೇ 20ಕ್ಕೂ ಹೆಚ್ಚು ಕೊರೊನಾ ರೋಗಿಗಳ ಸಾವು

ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆ ಬೆನ್ನಲ್ಲೇ 20ಕ್ಕೂ ಹೆಚ್ಚು ಕೊರೊನಾ ರೋಗಿಗಳ ಸಾವು

ಚಾಮರಾಜನಗರ: ಕಳೆದ ರಾತ್ರಿ ಆಕ್ಸಿಜನ್ ಕೊರತೆ ಉಂಟಾದ ಬೆನ್ನಲ್ಲೇ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಕೊರೊನಾ ರೋಗಿಗಳ ಸಾವನ್ನಪ್ಪಿದ್ದಾರೆ.

ಕಳೆದ ರಾತ್ರಿ ಆಕ್ಸಿಜನ್ ಇಲ್ಲದೆ ರೋಗಿಗಳು ಪರದಾಟ ನಡೆಸಿದ್ರು. ವಿಷಯ ತಿಳಿದ ಬಳಿಕ ಕೆಲ ಹೊತ್ತಿನಲ್ಲಿ ಸಂಸದ ಪ್ರತಾಪ್ ಸಿಂಹ 50 ಜಂಬೋ ಆಕ್ಸಿಜನ್ ಸಿಲಿಂಡರ್​ಗಳನ್ನ ಕಳಿಸಿಕೊಟ್ಟಿದ್ದರು. ಆದ್ರೆ ಆಕ್ಸಿಜನ್ ಸಿಲಿಂಡರ್​ಗಳು ಬರುವ ವೇಳೆಗೆ ಹಲವು ಕೊರೊನಾ ರೋಗಿಗಳು ಕೊನೆಯುಸಿರೆಳೆದಿದ್ದಾರೆ. ನಿನ್ನೆ ರಾತ್ರಿ 16 ಹಾಗೂ ಇಂದು ಬೆಳಗಿನ ಜಾವ 4ಕ್ಕೂ ಹೆಚ್ಚು ರೋಗಿಗಳು ಮೃತಪಟ್ಟಿದ್ದಾರೆ.

 

ವಿಷಯ ತಿಳಿಯುತ್ತಿದ್ದಂತೆ ರೋಗಿಗಳ ಸಂಬಂಧಿಕರು ಜಿಲ್ಲಾಸ್ಪತ್ರೆಗೆ ಧಾವಿಸುತ್ತಿದ್ದು,ಆಕ್ರಂದನ ಮುಗಿಲುಮುಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಸ್ಪತ್ರೆ ಮುಂಭಾಗ ಪೊಲೀಸ್ ಭದ್ರತೆ ಒದಗಿಸಲಾಗಿದೆ.

The post ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆ ಬೆನ್ನಲ್ಲೇ 20ಕ್ಕೂ ಹೆಚ್ಚು ಕೊರೊನಾ ರೋಗಿಗಳ ಸಾವು appeared first on News First Kannada.

Source: newsfirstlive.com

Source link