ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಚಂದನಾ, ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಚಾಮರಾಜನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಉಪನ್ಯಾಸಕಿ ಚಂದನಾ
ಚಾಮರಾಜನಗರ: ಚಾಮರಾಜನಗರದ JSS ಹಾಸ್ಟೆಲ್ನಲ್ಲಿ ಉಪನ್ಯಾಸಕಿ ಚಂದನಾ(26) ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಟ್ಟುಹಬ್ಬದಂದೇ ಚಂದನಾ ನೇಣಿಗೆ ಶರಣಾಗಿದ್ದಾರೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ನಿವಾಸಿ ಚಂದನಾ, ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್ನೋಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಚಾಮರಾಜನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೀರಿನಲ್ಲಿ ಕಾರು ಸಮೇತ ಕೊಚ್ಚಿ ಹೋಗಿ ವ್ಯಕ್ತಿ ಸಾವು
ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸಾತ್ಕೊಳಿ ಬಳಿ ಶೆಟ್ಟಿಕೊಪ್ಪ ನಿವಾಸಿ ಪ್ರಸನ್ನ (50) ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿದ್ದಾರೆ. ನಿನ್ನೆ ರಾತ್ರಿ ಮನೆಗೆ ತೆರಳುವ ವೇಳೆ ಅವಘಡ ಸಂಭವಿಸಿದೆ. ರಸ್ತೆ ಮೇಲೆ ನೀರು ಹರಿಯುತ್ತಿರುವುದನ್ನು ಗಮನಿಸದೇ ಪ್ರಸನ್ನ ಕಾರು ಚಲಾಯಿಸಿದ್ದಾರೆ. ನಿನ್ನೆಯಿಂದಲೂ ಪ್ರಸನ್ನರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ನೀರಿನ ಪ್ರಮಾಣ ತಗ್ಗಿದ ಹಿನ್ನೆಲೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಟೈಯರ್ ಬ್ಲಾಸ್ಟ್ ಆಗಿ ಪಲ್ಟಿ ಹೊಡೆದ ಲಾರಿ
ರಾಮನಗರ: ಬಸವನಪುರ ಗ್ರಾಮದ ಬಳಿ ಟೈರ್ ಸ್ಫೋಟಗೊಂಡು ಲಾರಿ ಉರುಳಿಬಿದ್ದಿದೆ. ಇದರಿಂದ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಗಾಯಾಳು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸಕ್ಕರೆ ಚೀಲ ತುಂಬಿಕೊಂಡು ಮದ್ದೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಲಾರಿ ಪಲ್ಟಿಯಾಗಿದೆ. ರಾಮನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.