ಚಾಮರಾಜನಗರ: ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಮೃತಪಟ್ಟಿದ್ದ 24 ಮಂದಿಯ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮೇ 2 ಮತ್ತು ಮೇ 3 ರಂದು ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್​ ಕೊರತೆಯಿಂದ ಒಟ್ಟು 24 ರೋಗಿಗಳು ಸಾವನ್ನಪ್ಪಿದ್ದರು. ಸದ್ಯ ಇವರ ಕುಟುಂಬಕ್ಕೆ ಸರ್ಕಾರ ಒಟ್ಟು 48 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಹಣವನ್ನು ಮುಖ್ಯಮಂತ್ರಿಗಳ ವಿಪತ್ತು ನಿರ್ವಹಣ ನಿಧಿಯಿಂದ ನೀಡಲು ಸರ್ಕಾರ ನಿರ್ದೇಶನ ನೀಡಿದ್ದು, ಮೃತ 24 ಜನರ ವಿವರಗಳನ್ನು ಜಿಲ್ಲಾ ವೈದ್ಯಾಧಿಕಾರಿಗಳು ಹಾಗೂ ಡಿಸಿ ಅವರಿಂದ ಪಡೆದುಕೊಳ್ಳಲು, ಪರಿಹಾರ ಮೊತ್ತ ತಲುಪಿಸಿರುವ ಬಗ್ಗೆ ಹೈ ಕೋರ್ಟ್​​ಗೆ ವರದಿ ಸಲ್ಲಿಸಲು ಆದೇಶದಲ್ಲಿ ತಿಳಿಸಿದ್ದಾರೆ.

ದುರಂತದ ಕುರಿತಂತೆ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ಹೈಕೋರ್ಟ್​​ಗೆ ವರದಿ ಸಲ್ಲಿಕೆ ಮಾಡಿ, ಘಟನೆಗೆ ಜಿಲ್ಲಾಧಿಕಾರಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಕಾರಣ ಎಂದು ವರದಿಯಲ್ಲಿ ತಿಳಿಸಿತ್ತು. ಈ ಕುರಿತಂತೆ ಸರ್ಕಾರ ಪರ ವಕೀಲರು ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದರು.

The post ಚಾಮರಾಜನಗರ ಆಕ್ಸಿಜನ್​​ ದುರಂತ; ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ appeared first on News First Kannada.

Source: newsfirstlive.com

Source link