ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ಮಂದಿ ಸಾವು

ಚಾಮರಾಜನಗರ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  ದುರಂತ ಸಂಭವಿಸಿದ್ದು 24 ಮಂದಿ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ 16, ಬೆಳಗಿನ ಜಾವ 6ಕ್ಕೂ ಹೆಚ್ಚು ಜನ ಆಕ್ಸಿಜನ್ ಕೊರತೆಯಿಂದ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. 24 ಮಂದಿ ಸಾವನ್ನಪ್ಪಿರುವುದನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಿನ್ನೆ ರಾತ್ರಿ ಆಕ್ಸಿಜನ್ ಖಾಲಿಯಾಗಿದೆ ಎಂದು ರೋಗಿಗಳ ಸಂಬಂಧಿಕರ ಆರೋಪ ಮಾಡುತ್ತಿದ್ದು, ಜಿಲ್ಲಾಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ಆಕ್ಸಿಜನ್ ಕೊರತೆಯಿಂದ ನನ್ನ ಅಣ್ಣ ಮೃತ ಪಟ್ಟಿದ್ದಾನೆ. ನಿನ್ನೆ ರಾತ್ರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಎದುರಾಗಿದೆ. ಅಧಿಕಾರಿಗಳನ್ನು ಕೇಳಿದ್ರೆ ಆಕ್ಸಿಜನ್ ವ್ಯವಸ್ಥೆಯಾಗಿದೆ ಎಂದು ತಿಳಿಸಿದ್ದರು. ನಾನೊಬ್ಬ ಜನ ಪ್ರತಿನಿಧಿಯಾಗಿ ನನ್ನ ಅಣ್ಣನನ್ನ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಚಾಮರಾಜನಗರ ಬಿಜೆಪಿ ಸದಸ್ಯ ಚಂದ್ರಶೇಖರ್ ಗಂಭೀರ ಆರೋಪ ಮಾಡಿದ್ದಾರೆ.

The post ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೇ 24 ಮಂದಿ ಸಾವು appeared first on Public TV.

Source: publictv.in

Source link