ಚಾಮರಾಜನಗರ: ಗುಂಡ್ಲುಪೇಟೆ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ | Chamarajanagar gundlupet Lokayukta raids on RTO check post


ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಆರ್​ಟಿಒ ಚೆಕ್​ಪೋಸ್ಟ್​ ಮೇಲೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಚಾಮರಾಜನಗರ: ಗುಂಡ್ಲುಪೇಟೆ ಆರ್‌ಟಿಒ ಚೆಕ್‌ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ಕಚೇರಿ

ಬೆಂಗಳೂರು: ಚಾಮರಾಜನಗರ (Chamrajnagar) ಜಿಲ್ಲೆಯ ಗುಂಡ್ಲುಪೇಟೆ ಆರ್​ಟಿಒ (RTO) ಚೆಕ್​ಪೋಸ್ಟ್​ (Check Post) ಮೇಲೆ ಇಂದು ಲೋಕಾಯುಕ್ತ (Lokayukta) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚೆಕ್​ಪೋಸ್ಟ್​ನಲ್ಲಿ ಅವ್ಯಾಹತವಾಗಿ ಲಂಚ ಪಡೆಯುತ್ತಿದ್ದ ಆರೋಪ ಹಿನ್ನೆಲೆ ಮೈಸೂರು ಮತ್ತು ಚಾಮರಾಜನಗರ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಎಸ್​ಪಿ, ಇಬ್ಬರು ಡಿವೈಎಸ್​ಪಿ, ಮೂವರು ಇನ್ಸ್​ಪೆಕ್ಟರ್​ ನೇತೃತ್ವದ ತಂಡ ದಾಳಿ ಮಾಡಿದ್ದು, ದಾಳಿ ವೇಳೆ 94,950 ರೂಪಾಯಿ ಪತ್ತೆಯಾಗಿದೆ. ಇದರಲ್ಲಿ 7,999 ರೂಪಾಯಿಗೆ ಯಾವುದೇ ರಶೀದಿ ಹಾಕದೆ ಸಂಗ್ರಹಿಸಿದ್ದರು.

ನಂಗಲಿ ಚೆಕ್​​ಪೋಸ್ಟ್​​ ಮೇಲೆ ಲೋಕಾಯುಕ್ತ ದಾಳಿ

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ‌ ಚೆಕ್​ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ದಾಳಿ ವೇಳೆ 75 ಸಾವಿರ ನಗದು, ಪ್ರಮುಖ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದೆ. ಲೋಕಾಯುಕ್ತ ಎಸ್​​ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಚೆಕ್​​ಪೋಸ್ಟ್​​ನಲ್ಲಿ ಸತತ 7 ಗಂಟೆ ತಪಾಸಣೆ ಮಾಡಿದ್ದಾರೆ. ಹಾಗೇ ಕಲಬುರಗಿ ಜಿಲ್ಲೆ ವ್ಯಾಪ್ತಿಯ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ.

ಸಾರಿಗೆ ಇಲಾಖೆಯ ಚೆಕ್​​ಪೋಸ್ಟ್​ಗಳಲ್ಲಿ ಲಕ್ಷ ಲಕ್ಷ ಹಣ ಜಪ್ತಿ 

ರಾಜ್ಯದ ವಿವಿಧ ಚೆಕ್​​ಪೋಸ್ಟ್​​ಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಲಕ್ಷ ಲಕ್ಷ ಹಣ ಜಪ್ತಿ ಮಾಡಿದೆ. ದಾಳಿಯಲ್ಲಿ ಲೋಕಾಯುಕ್ತ ಮಹತ್ವದ ದಾಖಲೆ, ಹಣ ಜಪ್ತಿ ಮಾಡಿಕೊಂಡಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಲೋಕಾಯುಕ್ತ ಅಧಿಕಾರಿಗಳು ವಿಜಯಪುರ ಧೂಳ್ಖೇಡ್ ಚೆಕ್​​ಪೋಸ್ಟ್​ನಲ್ಲಿ ಲಕ್ಷ ಲಕ್ಷ ಹಣ ಜಪ್ತಿ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣನವರ್ ನೇತೃತ್ವದ ದಾಳಿ ನಡೆದಿದ್ದು, ದಾಳಿ ವೇಳೆ 4 ಲಕ್ಷ 53 ಸಾವಿರ ಅಕ್ರಮ ಹಣ ಜಪ್ತಿ ಮಾಡಿಕೊಳ್ಳಲಾಗಿದೆ.

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಂಗನಹಳ್ಳಿ ಚೆಕ್ಪೋಸ್ಟ್​​  ಮೇಲೆ ಲೋಕಾಯುಕ್ತ ಎಎಸ್ಪಿ ಜೆ. ರಘು ನೇತೃತ್ವದಲ್ಲಿ ದಾಳಿ ನಡೆದಿದ್ದು, ದಾಳಿ ವೇಳೆ 3 ಲಕ್ಷ 62 ಸಾವಿರ ಹಣ ಜಪ್ತಿ ಮಾಡಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ ಅತ್ತಿಬೆಲೆ ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಜೋಶಿ ಶೀನಾಥ್ ನೇತೃತ್ವದಲ್ಲಿ ದಾಳಿ ನಡೆದಿದೆ.
ದಾಳಿ ವೇಳೆ 62,227 ಹಣ ಜಪ್ತಿ ಮಾಡಿ, ಮುಂದಿನ ಕ್ರಮಕ್ಕೆ ಆದೇಶಿಸಲಾಗಿದೆ.  ವಾಹನ ನಿರೀಕ್ಷಕಿ ಲಕ್ಷ್ಮಿ ಕಿಟಕಿಯಿಂದ 14 ಸಾವಿರ ಹಣ ಎಸೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.

ರಾಜ್ಯಾದ್ಯಂತ ಆರ್​ಟಿಓ ಚೆಕ್​ ಪೋಸ್ಟ್​ಗಳ ಮೇಲೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ: ಒಂದೂವರೆ ಲಕ್ಷ ರೂ. ಪತ್ತೆ

ವಾಹನ ಸವಾರರಿಂದ ಹಣ ವಸೂಲಿ ಕುರಿತು ದೂರು ಹಿನ್ನೆಲೆ ರಾಜ್ಯದ ಹಲವೆಡೆ RTO ಚೆಕ್ ​ಪೋಸ್ಟ್​ಗಳ ಮೇಲೆ ಲೋಕಾಯುಕ್ತ ದಾಳಿ ಮಾಡಿದೆ. ಬೆಂಗಳೂರು ಹೊರವಲಯದಲ್ಲಿನ ಅತ್ತಿಬೆಲೆ, ಬೀದರ್ ಜಿಲ್ಲೆಯ ಹುಮ್ನಾಬಾದ್​​, ಬಳ್ಳಾರಿಯ ಹಗರಿ RTO ಚೆಕ್​ ಪೋಸ್ಟ್ ಮೇಲೂ ದಾಳಿ ಮಾಡಲಾಗಿದೆ. ಬೀದರ್, ಕಲ್ಬುರ್ಗಿ ಎಸ್ಪಿ ಪಿ.ಕರ್ನೂಲ್ ನೇತೃತ್ವದ ತಂಡದಿಂದ ಬೆಳಗ್ಗೆ ನಾಲ್ಕು ಗಂಟೆಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಚೇಕ್ ಪೋಸ್ಟ್​ನಲ್ಲಿ ಒಂದೂವರೆ ಲಕ್ಷ ರೂಪಾಯಿ ಹಣ ಪತ್ತೆಯಾಗಿದೆ. ಪತ್ತೆಯಾದ ಹಣ ದಂಡ ಹಾಕಿದ್ದೋ ಅಥವಾ ಲಂಚದ ಹಣವೋ ಎಂದು ಅಧಿಕಾರಿಗಳು ಪರೀಲನೆಗೆ ತೊಡಗಿದ್ದಾರೆ. ​ಆರ್​ಟಿಓ ಅಧಿಕಾರಿ ಹೇಮಂತ ಎನ್ನುವವರ ಬಳಿ ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ.

ವಿಜಯಪುರ ಹೊರವಲಯದ ಚೆಕ್​ಪೋಸ್ಟ್ ಮೇಲೆ‌ ದಾಳಿ

ವಿಜಯಪುರ ಜಿಲ್ಲೆಯ ಹೊಸಪೇಟೆಯ ಹೊರವಲಯದ ಶನೇಶ್ವರ ದೇವಾಲಯದ ಬಳಿ ಇರೋ RTO ಚೆಕ್ ಪೋಸ್ಟ್ ಮೇಲೆ ಬೆಳಗಿನ ಜಾವ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. DYSP ಅಯ್ಯನಗೌಡ ನೇತೃತ್ವದಲ್ಲಿ ದಾಳಿ ಮಾಡಿದ್ದು, ದಾಳಿ ವೇಳೆ ಯಾರೂ ಇರಲಿಲ್ಲ ಎಂಬ ಮಾಹಿತಿ ನೀಡಲಾಗಿದೆ. ಭಾರಿ ವಾಹನಗಳು ಸೇರಿದಂತೆ ಇತರೆ ವಾಹನ ಚಾಲಕರ ಬಳಿ ಹಣ ವಸೂಲಿ ಆರೋಪ ಕೇಳಿಬಂದಿದ್ದು, ದೂರಿನ ಆಧಾರದ ಮೇಲೆ ದಾಳಿ ಮಾಡಲಾಗಿದೆ. ಇನ್ನು ಬೆಳಗಾವಿ ಜಿಲ್ಲೆ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯ ಬೆಂಗಳೂರು-ಮುಂಬೈ ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಚೆಕ್ ​ಪೋಸ್ಟ್ ಮೇಲೂ ಅಧಿಕಾರಿಗಳು ದಾಳಿ ಮಾಡಿದ್ದು, ದಾಳಿ ವೇಳೆ ಚೆಕ್​ಪೋಸ್ಟ್​​ನಲ್ಲಿ ನಗದು ಪತ್ತೆಯಾಗಿದೆ.

ಪರ್ಮಿಟ್ ಹಾಗೂ ಟ್ಯಾಕ್ಸ್ ಇಲ್ಲದೇ ಓಡಾಡುತ್ತಿರುವ ಬಸ್​ಗಳ ಮೇಲೂ ದಾಳಿ

ತುಮಕೂರು: ದಸರಾ ಹಬ್ಬ ಹಿನ್ನೆಲೆಯಲ್ಲಿ ಖಾಸಗಿ ಬಸ್ ಮೇಲೆ ಆರ್​ಟಿಓ ಅಧಿಕಾರಿಗಳ ದಾಳಿ ಮಾಡಿದ್ದು, ಬೆಂಗಳೂರು ಹಾಗೂ ಹೊಸದುರ್ಗಕ್ಕೆ ಓಡಾಡುತ್ತಿದ್ದ Ka41 c8898 ಹಾಗೂ ka41 c 8903 ನಂಬರ್​ನ ಎರಡು‌ ಖಾಸಗಿ ಬಸ್ ವಶಕ್ಕೆ ಪಡೆದಿದ್ದಾರೆ. ತುಮಕೂರು ಆರ್​ಟಿಓ ಇನ್ಸಪೇಕ್ಟರ್ ಷರೀಪ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ದಸರಾ ಹಬ್ಬಕ್ಕೆ ಹೆಚ್ಚಿನ ಶುಲ್ಕ ಪಡೆಯುತ್ತಾರೆಂಬ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಪರ್ಮಿಟ್ ಹಾಗೂ ಟ್ಯಾಕ್ಸ್ ಇಲ್ಲದೇ ಓಡಾಡುತ್ತಿರುವ ಬಸ್​ಗಳ ಮೇಲೂ ದಾಳಿ ಮಾಡಿದ್ದಾರೆ. ಕೇವಲ ಬೆಂಗಳೂರಿನಲ್ಲಿ ಓಡಿಸಲು ಪರ್ಮಿಟ್ ಇರುವ ಬಸ್​ಗಳು, ಆದರೆ ಬೆಂಗಳೂರಿನಿಂದ ಹೊಸದುರ್ಗ ನಡುವೆ ಬಸ್​ಗಳು ಓಡಾಟ ಮಾಡುತ್ತಿದ್ದವು. ಬೆಂಗಳೂರಿನಲ್ಲಿ ಫ್ಯಾಕ್ಟರಿಗಳಿಗೆ ಓಡಾಡಲು ಬಳಸುವ ಬಸ್​ನಲ್ಲಿ ಪ್ರಯಾಣಿಕರಿದ್ದ ಕಾರಣ ದಾಳಿ ಮಾಡಲಾಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ನಂಗಲಿ ಆರ್.ಟಿ.ಓ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದ ತಂಡ ದಾಳಿ ಮಾಡಿದೆ. ಗಡಿ ಭಾಗದಲ್ಲಿ ವಾಹನಗಳಿಂದ ಹಣ ವಸೂಲಿ ಆರೋಪ ಹಿನ್ನೆಲೆ ದಾಳಿ ಮಾಡಿದ್ದು, ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.