ಬೆಳಗಾವಿ: ಜಿಲ್ಲೆಯ ಬಿಮ್ಸ್ ನಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ 2 ಹಸುಗೂಸುಗಳು ನಿಗೂಢವಾಗಿ ಸಾವನ್ನಪ್ಪಿವೆ.
ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ 2 ಹಸುಗೂಸುಗಳು ಸಾವನ್ನಪ್ಪಿವೆ. ಕಂದಮ್ಮಗಳ ನಿಗೂಢ ಸಾವಿಗೆ ಕಾರಣ ಪತ್ತೆ ಹಚ್ಚಲು ಜಿಲ್ಲಾ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಈ ಮಕ್ಕಳಿಗೆ ಚುಚ್ಚುಮದ್ದು ಕೊಡಿಸಿರೋದಾಗಿ ಪೋಷಕರು ತಿಳಿಸಿದ್ದಾರೆ.
ಚುಚ್ಚುಮದ್ದು ಪಡೆದಿದ್ದ 17 ಮಕ್ಕಳ ಪೈಕಿ 2 ಮಕ್ಕಳು ತೀವ್ರ ಅಸ್ವಸ್ಥಗೊಂಡಿದ್ವು. ಇವುಗಳನ್ನು ಜಿಲ್ಲೆಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.