ನವದೆಹಲಿ: ಕೊರೊನಾ ಸೋಂಕಿಗೊಳಗಾದವರು ಚಿಕಿತ್ಸೆ ಕೊರತೆಯಿಂದಾಗಿ ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ ಸೂಚಿಸುತ್ತೇನೆಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

ದೇಶದ ಪ್ರತಿಯೊಂದು ರಾಜ್ಯದ ಪ್ರಾರ್ಥನೆಗಳು ಮತ್ತು ಅನುಕಂಪ ಈ ಕಠಿಮ ಸಂದರ್ಭದಲ್ಲಿ ನಿಮ್ಮೊಂದಿಗಿದೆ. ಚಿಕಿತ್ಸೆಯ ಕೊರತೆಯಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಳ್ಳುತ್ತಿರುವ ದೇಶದ ನಾಗರೀಕರಿಗೆ ಸಂತಾಪ ಸೂಚಿಸುತ್ತಿದ್ದೇನೆ. ಈ ದುರಂತದಲ್ಲಿ ನೀವು ಒಬ್ಬಂಟಿಯಾಗಿಲ್ಲ. ದೇಶದ ಪ್ರತಿಯೊಂದು ರಾಜ್ಯಗಳ ಪ್ರಾರ್ಥನೆ ಮತ್ತು ಅನುಕಂಪ ನಿಮ್ಮೊಂದಿಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಭಾರತದಲ್ಲಿ ಮಹಾಮಾರಿ ಕೊರೊನಾ ಆರ್ಭಟಿಸುತ್ತಿದ್ದು, ದೇಶದಲ್ಲಿಂದು 3,86,452 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೆ, 3498 ಮಂದಿ ಸಾವನ್ನಪ್ಪಿದ್ದಾರೆ. ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಕೊರೊನಾ ಕುರಿತಾದ ಎಲ್ಲಾ ಮುಂಜಾಗೃತ ಕ್ರಮಗಳನ್ನಯ ಪಾಲಿಸುವುದು ಅಗತ್ಯವಾಗಿದೆ.

The post ಚಿಕಿತ್ಸೆ ಕೊರತೆಯಿಂದಾಗಿ ಪ್ರೀತಿ ಪಾತ್ರರನ್ನು ಕಳೆದುಕೊಳ್ಳುತ್ತಿರುವ ನಾಗರೀಕರಿಗೆ ಸಂತಾಪ- ರಾಹುಲ್ ಗಾಂಧಿ appeared first on Public TV.

Source: publictv.in

Source link