ಚಿಕ್ಕಬಳ್ಳಾಪುರ:  ಕೋವಿಡ್ ಆಸ್ಪತ್ರೆಯಲ್ಲಿ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್​ಗಳನ್ನ  ಕಳ್ಳತನ ಮಾಡಿರೋ ಘಟನೆ ಆರೋಗ್ಯ ಸಚಿವ ಡಾ.ಕೆ ಸುಧಾಕರ್​ ಅವರ ತವರು ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಸಿಲಿಂಡರ್​ಗಳು ಕಳ್ಳತನವಾಗಿವೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾ ಸರ್ಜನ್ ಡಾ.ಪಿ.ವಿ ರಮೇಶ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದಲ್ಲಿ ಖಾಸಗಿ ಆಸ್ಪತ್ರೆಗಳ ಮೇಲೆ ಅನುಮಾನ ಮೂಡಿದೆ. ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಡಿಮ್ಯಾಂಡ್ ಹೆಚ್ಚಾಗಿರೋ ಹಿನ್ನೆಲೆ, ಆಸ್ಪತ್ರೆಯ ಸಿಬ್ಬಂದಿಯೇ ಶಾಮಿಲಾಗಿ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ ನಗರ ಠಾಣೆಗೆ ದೂರು ನೀಡಿರೋ ಸರ್ಜನ್ ರಮೇಶ್​, ಸಿಲಿಂಡರ್​ಗಳನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.

The post ಚಿಕ್ಕಬಳ್ಳಾಪುರ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್​​ಗಳ ಕಳ್ಳತನ appeared first on News First Kannada.

Source: newsfirstlive.com

Source link