ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಏರಿಕೆಯಾಗುತ್ತಿದೆ. ಅದ್ರಲ್ಲೂ ಬೆಂಗಳೂರಿನಲ್ಲಿ ಜನರು ಬೆಡ್​ ಸಿಗದೇ ಪರಿತಪಿಸುತ್ತಿರುವ ಬಗ್ಗೆ ವರದಿಯಾಗುತ್ತಿವೆ. ಈ ಮಧ್ಯೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಮ್ಮ ಕ್ಷೇತ್ರ ಚಿಕ್ಕಬಳ್ಳಾಪುರದ ಸೋಂಕಿತರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್​ಗಳನ್ನು ಬುಕ್​ ಮಾಡಿ ಆದೇಶ ಹೊರಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್.. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಬ್ಬಾಳದ ಕೊಲಂಬಿಯಾ ಏಷ್ಯಾ, ಬ್ಯಾಪ್ಟಿಸ್ಟ್ ಹಾಗೂ ಸಹಕಾರ ನಗರದ ಆಸ್ಟರ್ ಸಿಎಂಐ ಆಸ್ಪತ್ರೆಗಳಲ್ಲಿ ಶೇ.15% ಹಾಸಿಗೆಗಳನ್ನು ಜಿಲ್ಲೆಯಿಂದ ಸರ್ಕಾರಿ ಕೋಟಾದಡಿಯಲ್ಲಿ ಶಿಫಾರಸ್ಸು ಮಾಡಲ್ಪಡುವ ಸೋಂಕಿತರಿಗೆ ಮೀಸಲಿಡಬೇಕೆಂದು ಆದೇಶಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

The post ಚಿಕ್ಕಬಳ್ಳಾಪುರ ಸೋಂಕಿತರಿಗೆ ಬೆಂಗಳೂರಲ್ಲಿ ಬೆಡ್​ ಮೀಸಲಿಡಿ.. ಸುಧಾಕರ್ ಆದೇಶ appeared first on News First Kannada.

Source: newsfirstlive.com

Source link

Leave a Reply