ಚಿತ್ರದುರ್ಗ: ಲಾಕ್​ಡೌನ್ ಸಡಿಲಿಕೆ ಬಳಿಕ ಬೆನ್ನಲ್ಲೇ ಭೀಕರ ಅಪಘಾತ ನಡೆದಿದ್ದು ಸ್ಥಳದಲ್ಲೇ ಮೂವರು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹೊರವಲಯದ ಈರಜ್ಜನಹಟ್ಟಿ ಬಳಿ ನಡೆದಿದೆ.

ಆ್ಯಂಬುಲೆನ್ಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಸ್ಕೂಟಿಗೆ, ಖಾಸಗಿ ಌಂಬುಲೆನ್ಸ್​ ಡಿಕ್ಕಿ ಹೊಡೆದಿದೆ. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆ ಹೊರಟಿದ್ದ ಆ್ಯಂಬುಲೆನ್ಸ್​  ಹೊಳಲ್ಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ.

ಈವರೆಗೆ, ಮೃತರ ಗುರುತು ಪತ್ತೆ ಆಗಿಲ್ಲ. ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

The post ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ ಮೂವರ ದುರ್ಮರಣ appeared first on News First Kannada.

Source: newsfirstlive.com

Source link