ಚಿತ್ರದುರ್ಗ: ಸರ್ಕಾರವೇನೋ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸಿಟಿ ಸ್ಕ್ಯಾನ್ ಮಾಡುವಂತೆ ಆದೇಶ ಹೊರಡಿಸಿದೆ. ಆದ್ರೆ ಈ ಆದೇಶ ಕಡತಕ್ಕಷ್ಟೇ ಸೀಮಿತವಾಗಿಹೋಗಿದೆಯಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ. ಇದಕ್ಕೆ ಕಾರಣ ಚಿತ್ರದುರ್ಗದ ಜಿಲ್ಲಾಸ್ಪತ್ರೆ.

ಚಿತ್ರದುರ್ಗದಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಆರೋಗ್ಯ ಸಚಿವರ ಆದೇಶಕ್ಕೆ ಕಿಂಚಿತ್ತೂ ಕಿಮ್ಮತ್ತಿಲ್ಲ ಎನ್ನುವಂತಾಗಿದೆ. ಯಾಕಂದ್ರೆ ಈ ಆಸ್ಪತ್ರೆಯಲ್ಲಿ ಸಿ.ಟಿ. ಸ್ಕ್ಯಾನ್ ಮಾಡಲು 2,000 ರೂ ದರ ನಿಗದಿ ಮಾಡಲಾಗಿದೆಯಂತೆ. ನಿಯಮಬಾಹಿರವಾಗಿ ಹಣ ವಸೂಲಿ ಮಾಡುತ್ತಿದೆ ಎಂದು ಜಿಲ್ಲಾಸ್ಪತ್ರೆಯ ವಿರುದ್ಧ ಆರೋಪ ಕೇಳಿಬಂದಿದೆ.ಪರಿಸ್ಥಿತಿ ಹೀಗಿದ್ದರೂ ಸಹ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಸ್ಥಳೀಯ ಶಾಸಕರು ಕಣ್ಮುಚ್ಚಿ ಕುಳಿತಿದ್ದಾರೆ ಎನ್ನಲಾಗಿದೆ. ಹೀಗಾಗಿ ಬಡವರ ಗೋಳು ಕೇಳುವವರಿಲ್ಲದಂತಾಗಿದೆ.

The post ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಬಡವರ ಸುಲಿಗೆ.. ಆರೋಗ್ಯ ಸಚಿವರ ಆದೇಶಕ್ಕೂ ಡೋಂಟ್​ಕೇರ್ appeared first on News First Kannada.

Source: newsfirstlive.com

Source link